ಉದಯವಾಹಿನಿ, ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಎಫ್-16 ಮತ್ತು ಜೆಎಫ್-17 ಯುದ್ಧ ವಿಮಾನಗಳನ್ನು ನಾಶ ಮಾಡಲಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಹೇಳಿದ್ದಾರೆ.
ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಕಾರ್ಯಾಚರಣೆಯ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, F-16 ಮತ್ತು JF-17 ವರ್ಗದ ನಡುವಿನ 5 ಪಾಕಿಸ್ತಾನಿ ಹೈಟೆಕ್ ಯುದ್ಧವಿಮಾನಗಳನ್ನು ಹೊಡೆದು ಹಾಕಿದ್ದೇವೆ ಎಂದಿದ್ದಾರೆ.
4 ಸ್ಥಳಗಳಲ್ಲಿದ್ದ ರಾಡಾರ್‌ಗಳು, 2 ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳು, 2 ರನ್‌ವೇಗಳು, 3 ಹ್ಯಾಂಗರ್‌ಗಳು ನಾಶಮಾಡಿದ್ದೇವೆ. ಈ ಹ್ಯಾಂಗರ್‌ನಲ್ಲಿದ್ದ ಎಫ್-16 ಮತ್ತು ಜೆಎಫ್-17 ವಿಮಾನಗಳು ನಾಶವಾಗಿದೆ ಎಂದು ತಿಳಿಸಿದರು.
ಭಾರತೀಯ ಪಡೆಗಳು ಸುಮಾರು 300 ಕಿಲೋಮೀಟರ್ ದೂರದ ಗುರಿಗಳನ್ನು ಯಶಸ್ವಿಯಾಗಿ ಹೊಡೆದುರುಳಿಸುವ ಮೂಲಕ ಈ ಕಾರ್ಯಾಚರಣೆ ಇತಿಹಾಸ ನಿರ್ಮಿಸಿದೆ. ನಮ್ಮ ವಾಯುರಕ್ಷಣಾ ವ್ಯವಸ್ಥೆ S-400 ಉತ್ತಮ ಶಸ್ತ್ರಾಸ್ತ್ರ ವ್ಯವಸ್ಥೆ ಎನ್ನುವುದು ಸಾಬೀತಾಗಿದೆ ಎಂದರು.
