ಉದಯವಾಹಿನಿ, ಲಕ್ನೋ: 2023ರಲ್ಲಿ ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ಕಿರುಕುಳ ನೀಡಿ ಮಹಿಳೆಯೊಬ್ಬಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಹಿಳೆ 2 ವರ್ಷದ ಬಳಿಕ ಪತ್ತೆಯಾಗಿದ್ದು, ಪ್ರಕರಣದಲ್ಲಿ ಸಿಲುಕಿದ್ದ ಮಹಿಳೆಯ ಪತಿ, ಆಕೆಯ ಅತ್ತೆ ಹಾಗೂ ಮಾವ ಸೇರಿದಂತೆ 6 ಮಂದಿ ಕಾನೂನಿನ ಕುಣಿಕೆಯಿಂದ ಪಾರಾಗಿದ್ದಾರೆ.
2023 ರಲ್ಲಿ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಪತಿಯ ಮನೆಯಿಂದ 20 ವರ್ಷದ ಮಹಿಳೆ ನಾಪತ್ತೆಯಾಗಿದ್ದಳು. ಈ ಸಂಬಂಧ 2023ರ ಅಕ್ಟೋಬರ್‌ 23 ರಂದು ನಾಪತ್ತೆಯಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ತೀವ್ರ ಹುಡುಕಾಟದ ಬಳಿಕವೂ ಆಕೆ ಪತ್ತೆ ಆಗದೇ ಇದ್ದಿದ್ದರಿಂದ ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಆಕೆಯ ಪೋಷಕರು ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಆರೋಪಿಸಿದ್ದರು. ಬಳಿಕ ವರದಕ್ಷಿಣೆ ಕಿರುಕುಳ ನೀಡಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ಸಹ ನೀಡಿದ್ದರು.
ತನಿಖೆ ನಡೆಸಿದ್ದ ಪೊಲೀಸರಿಗೆ ಮಹಿಳೆಯ ಯಾವ ಕುರುಹುಗಳು ಪತ್ತೆಯಾಗಿರಲಿಲ್ಲ. ನ್ಯಾಯಾಲಯದ ಆದೇಶದಂತೆ ಮಹಿಳೆಯ ಪತಿ ಹಾಗೂ 6 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಈಗ ಮಹಿಳೆ ಮಧ್ಯಪ್ರದೇಶದಲ್ಲಿ ಪ್ರತ್ಯಕ್ಷಳಾಗಿದ್ದಾಳೆ.

Leave a Reply

Your email address will not be published. Required fields are marked *

error: Content is protected !!