ಉದಯವಾಹಿನಿ, ಸಹಜಾಭಿನಯದ ಮೂಲಕ ಮನೆ ಮಾತಾಗಿರುವ ಕೋಮಲ್ ಕುಮಾರ್ ಇದೀಗ ಕೋಣ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿಯಾಗುತ್ತಿದ್ದಾರೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದ್ದ ಕೋಣ ಚಿತ್ರದ ಟ್ರೇಲರ್ ಇದೀಗ ರಿಲೀಸ್ ಆಗಿದೆ. ಕಾಮಿಡಿ, ಆಕ್ಷನ್, ಸಸ್ಪೆನ್ಸ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಇಲ್ಲಿ ಕೋಮಲ್ ಹೊಸ ಅವತಾರದಲ್ಲಿ ಕಾಣಿಸುತ್ತಾರೆ.ನಿರ್ಮಾಣದಲ್ಲಿ ಕೈ ಜೋಡಿಸಿರುವ ತನಿಷಾ ಕುಪ್ಪಂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೀರ್ತಿರಾಜ್, ರಿತ್ವಿ ಜಗದೀಶ್, ನಮ್ರತಾ ಗೌಡ, ವಿನಯ್ ಗೌಡ, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ್, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್, ನಿರಂಜನ್, ಅನಂತ್, ಶಿಶಿರ್ ಶಾಸ್ತ್ರಿ, ಗೋಲ್ಡ್ ಸುರೇಶ್, ಸುಷ್ಮಿತ, ಜಗಪ್ಪ, ಮಂಜು ಪಾವಗಡ, ಕುರಿ ಸುನಿಲ್, ಮೋಹನ್ ಕೃಷ್ಣರಾಜ್ ಹೀಗೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.
ಡಾರ್ಕ್ ಕಾಮೆಡಿ ಶೈಲಿಯಲ್ಲಿ ‘ಕೋಣ’ ಸಿನಿಮಾ ಮೂಡಿಬರಲಿದೆ. ಜಗ್ಗೇಶ್ ನಟನೆಯ ‘8 MM’ ಸಿನಿಮಾಗೆ ನಿರ್ದೇಶನ ಮಾಡಿದ್ದ ಎಸ್. ಹರಿಕೃಷ್ಣ ಅವರು ಸಿನಿಮಾಗೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ನಾಗೇಶ್.ಎನ್ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಒಂದು ನೈಜ ಘಟನೆ ಆಧರಿಸಿ ಚಿತ್ರ ತಯಾರಾಗಿದ್ದು ತೆರೆಗೆ ಬರಲು ಸಿದ್ಧವಾಗಿದೆ. ಕೋಮಲ್ ಅವರು ಈವರೆಗೂ ಕಾಣಿಸಿಕೊಂಡಿರದ ಪಾತ್ರವನ್ನು ‘ಕೋಣ’ ಸಿನಿಮಾದಲ್ಲಿ ನಿಭಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!