ಉದಯವಾಹಿನಿ, ನಟಿ ರಚಿತಾ ರಾಮ್ ಅವರು ರಾಜರಾಜೇಶ್ವರಿ ನಗರದಲ್ಲಿರುವ ತಮ್ಮನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ರಚಿತಾರಾಮ್ ಅಭಿನಯದ ʻಲ್ಯಾಂಡ್ ಲಾರ್ಡ್ʼ ಚಿತ್ರದ ರಚಿತಾ ರಾಮ್ ಅವರ ಅವರ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಲಾಯಿತು.
ಕೆ.ವಿ. ಸತ್ಯಪ್ರಕಾಶ್, ಹೇಮಂತ್ ಗೌಡ ಕೆ.ಎಸ್. ಅವರ ನಿರ್ಮಾಣದ, ಜಡೇಶ್ ಕೆ.ಹಂಪಿ ಅವರ ನಿರ್ದೇಶನದ ‘ಲ್ಯಾಂಡ್ ಲಾರ್ಡ್’ ಚಿತ್ರದಲ್ಲಿ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದು ರಚಿತಾ ರಾಮ್ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ನಟಿ, ಈ ವರ್ಷದ ಬರ್ತ್ ಡೇ ನನಗೆ ತುಂಬಾ ಸ್ಪೆಷಲ್. ʻಲ್ಯಾಂಡ್ ಲಾರ್ಡ್ʼ ಚಿತ್ರತಂಡದ ಕಡೆಯಿಂದ ಈ ಟೀಸರ್ ನನಗೆ ಸರ್‌ಪ್ರೈಸ್ ಗಿಫ್ಟ್. ಇದೊಂದು ವಿಭಿನ್ನ ಪಾತ್ರ ಎಂದು ಹೇಳಿದರು. ನಿರ್ದೇಶಕ ಜಡೇಶ್ ಕೆ.ಹಂಪಿ ಮಾತನಾಡಿ, ಇಂಥಹ ಪಾತ್ರವನ್ನು ರಚಿತಾ ಅವರು ಒಪ್ಪುತ್ತಾರಾ? ಎಂಬ ಆತಂಕವಿತ್ತು. ಅವರು ಒಪ್ಪಿಕೊಂಡು ಅಭಿನಯಿಸಿದ್ದು ತುಂಬಾ ಸಂತೋಷ. ʻಕೂಲಿʼ ಚಿತ್ರದಲ್ಲಿ ಕಲ್ಯಾಣಿಯಾಗಿ ನಟಿಸಿದ್ದರು. ಅದಕ್ಕಿಂತ ಬೇರೆ ಥರದಲ್ಲಿ ಈ ಪಾತ್ರ ಮೂಡಿ ಬಂದಿದೆ. ಇದರಲ್ಲಿ ಅವರು ಚಿನ್ನಮ್ಮ ಆಗಿದ್ದಾರೆ ಎಂದು ಹೇಳಿದರು.
ನಿರ್ಮಾಪಕ ಕೆ.ವಿ. ಸತ್ಯಪ್ರಕಾಶ್ ಮಾತನಾಡಿ, ನಮ್ಮ ಚಿತ್ರದಲ್ಲಿ ರಚಿತಾರಾಮ್ ಅವರು ಅದ್ಭುತ ಪಾತ್ರ ನಿರ್ವಹಿಸಿದ್ದಾರೆ. ಅವರು ರಾಷ್ಟ್ರಪ್ರಶಸ್ತಿ ಪಡೆಯುವ ಮಟ್ಟಕ್ಜೆ ಬೆಳೆಯಲಿ. ಇದು ನೈಜ ಘಟನೆಯನ್ನು ಆಧರಿಸಿ ನಿರ್ಮಿಸಿದ ಚಿತ್ರ. ಅಭಿನಯಕ್ಕೆ ರಚಿತಾ ರಾಮ್ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಸಿಗುತ್ತದೆ ಎಂದು ಭವಿಷ್ಯ ನುಡಿದರು.

Leave a Reply

Your email address will not be published. Required fields are marked *

error: Content is protected !!