ಉದಯವಾಹಿನಿ, ಕೋಲ್ಕತಾ: ಕಚ್ಚಾ ಬಾಂಬ್ ತಯಾರಿಸುತ್ತಿದ್ದಾಗ ಶನಿವಾರ ಬೆಳಗ್ಗೆ ಸ್ಫೋಟ ಉಂಟಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ. ಉಸ್ಮಾನ್ ಬಿಸ್ವಾಸ್ ಮೃತ ವ್ಯಕ್ತಿ. ಸ್ಫೋಟ ಉಂಟಾದ ತಕ್ಷಣವೇ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳದಿಂದ ಅಪಾರ ಪ್ರಮಾಣದ ಕಚ್ಚಾ ಬಾಂಬ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ರಾಣಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಘಟನೆ ರಾಣಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೆಟಿಯಾನಿ ಪ್ರದೇಶದಲ್ಲಿ ನಡೆದಿದೆ. ಸ್ಪೋಟದ ಸದ್ದು ಈ ಪ್ರದೇಶದಲ್ಲಿ ಭೀತಿಯನ್ನು ಉಂಟು ಮಾಡಿದೆ.
