ಉದಯವಾಹಿನಿ, ಸಿಂಧುದುರ್ಗ: ಒಂದೇ ಕುಟುಂಬದ ನಾಲ್ವರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಸಿಂಧುದುರ್ಗದ ಶಿರೋಡಾ-ವೇಲಗರ್ ಬೀಚ್‌ನಲ್ಲಿ ನಡೆದಿದೆ. ಇನ್ನು ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಪಿಕ್ನಿಕ್ ಗೆಂದು ಬಂದ ಕುಟುಂಬಕ್ಕೆ ಇದು ಬಹುದೊಡ್ಡ ಆಘಾತವನ್ನು ನೀಡಿದೆ. ಮೃತರಲ್ಲಿ ಇಬ್ಬರು ಸಿಂಧುದುರ್ಗದ ಕುಡಾಲ್ ಮೂಲದವರಾಗಿದ್ದರೆ, ಇತರ ಆರು ಮಂದಿ ಕರ್ನಾಟಕದ ಬೆಳಗಾವಿಯಿಂದ ಬಂದಿದ್ದರು ಎನ್ನಲಾಗಿದೆ.ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರೇಬಿಯನ್ ಸಮುದ್ರದಲ್ಲಿ ಶುಕ್ರವಾರ ಸಂಜೆ 4ಗಂಟೆ ಸುಮಾರಿಗೆ ದುರಂತವೊಂದು ನಡೆದಿದೆ. ಒಂದೇ ಕುಟುಂಬದ ಮೂವರು ಸದಸ್ಯರು ನೀರಲ್ಲಿ ಮುಳುಗಿ ಮೃತಪಟ್ಟಿದ್ದರೆ ಇನ್ನು ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಒಂದೇ ಕುಟುಂಬದ ಎಂಟು ಜನರ ಕುಟುಂಬ ಪಿಕ್ನಿಕ್‌ಗೆಂದು ಶಿರೋಡಾ- ವೇಲಗರ್ ಬೀಚ್‌ಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಎಂಟು ಮಂದಿಯೂ ಒಟ್ಟಿಗೆ ಈಜಲೆಂದು ಸಮುದ್ರಕ್ಕೆ ಇಳಿದಿದ್ದಾರೆ. ಸ್ವಲ್ಪ ಸಮಯದ ಬಳಿಕ ನೀರಿನ ಆಳದಲ್ಲಿ ಒಬ್ಬೊಬ್ಬರಾಗಿ ಮುಳುಗಲು ಪ್ರಾರಂಭಿಸಿದರು. ಇವರ ರಕ್ಷಣೆಗಾಗಿ ಯಾರಿಗೂ ಧಾವಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
