ಉದಯವಾಹಿನಿ, ಬೆಂಗಳೂರು: ಪದ್ಮಭೂಷಣ ಪುರಸ್ಕೃತ, ಭಾರತೀಯ ಪತ್ರಿಕೋದ್ಯಮ ಭೀಷ್ಮ ಟಿಜೆಎಸ್ ಜಾರ್ಜ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಹೆಬ್ಬಾಳದ ವಿದ್ಯುತ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಸಿಎಂ ಸಿದ್ದರಾಮಯ್ಯ ಅವರು ಚಿತಾಗಾರಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದರು. ಟಿಜೆಎಸ್ ಗೌರವಾರ್ಥವಾಗಿ ಪಾರ್ಥಿವ ಶರೀರಕ್ಕೆ ತ್ರಿವರ್ಣ ಧ್ವಜ ಹೊದಿಸಿ ಗೌರವ ಸಲ್ಲಿಸಲಾಯ್ತು. ಮೂರು ಸುತ್ತು ಗಾಳಿಯಲ್ಲಿ ಗುಂಡುಹಾರಿಸಿ ಪೊಲೀಸರು ಗೌರವ ಸಲ್ಲಿಸಿದರು. ಹಲವಾರು ಗಣ್ಯರು ಅಂತ್ಯಕ್ರಿಯೆಲ್ಲಿ ಭಾಗಿಯಾಗಿ ಟಿಜೆಎಸ್ ಜಾರ್ಜ್ ಅವರಿಗೆ ಗೌರವ ನಮನ ಸಲ್ಲಿಸಿದರು.
