ಉದಯವಾಹಿನಿ, ಭಾರತೀಯ ಕ್ರಿಕೆಟ್ ಲೋಕ ಎಂದೂ ನೆನಪಿಟ್ಟುಕೊಳ್ಳುವ ಸ್ಟಾರ್ ಆಟಗಾರ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಇನ್ನೂ ಕೆಲ ವರ್ಷಗಳವರೆಗೆ ಟಾಪ್-10 ಕ್ರಿಕೆಟಿಗರ ಪಟ್ಟಿಯಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುವ ಹೆಸರೆಂದರೇ ಅದು ರೋಹಿತ್ ಶರ್ಮಾ. ಅವರಿಗೆ ತಮ್ಮ ಕ್ರೆಕೆಟ್ ಬದುಕಿಗೆ ತೆರೆ ಎಳೆಯುವ ಸನಿಹಕ್ಕೆ ಬಂದಿದ್ದಾರೆ. ಅಲ್ಲದೇ ಕ್ರಿಕೆಟ್ ಲೋಕದ ಕಿಂಗ್ ಆಗಿ ಮೆರೆದಾಡಿದ ವಿರಾಟ್ ಕೊಹ್ಲಿ ಕೂಡ ಆಸ್ಟ್ರೇಲಿಯಾ ಏಕದಿನ ಸರಣಿ ಬಳಿಕ ಕ್ರಿಕೆಟ್ ವೃತ್ತಿ ಜೀವನಕ್ಕೆ ಗುಡ್‌ಬೈ ಹೇಳುವ ಸಾಧ್ಯತೆಗಳಿವೆ.
ರೋಹಿತ್ ಶರ್ಮಾ ಅವರು ಈ ಮಟ್ಟಕ್ಕೆ ಬೆಳೆಯಲು ಕಠಿಣಶ್ರಮವೇ ಕಾರಣ. ಯಶಸ್ಸಿಗೆ ಮತ್ತೇನಾದ್ರೂ ಸೂತ್ರ ಇದೆಯಾ ಅಂತ ರೋಹಿತ್ ಅವರನ್ನೊಮ್ಮೆ ಕೇಳಿ ನೋಡಿದ್ರೆ ಅವರು ಕೊಡುವ ಆನ್ಸರ್, `ಹಾರ್ಡ್ ವರ್ಕ್.. ಹಾರ್ಡ್ ವರ್ಕ್.. ಓನ್ಲಿ ಹಾರ್ಡ್ ವರ್ಕ್’. ಬಾಲ್ಯದಿಂದಲೇ ರೋಹಿತ್‌ಗೆ ಕ್ರಿಕೆಟ್ ಅಂದರೆ ಪ್ರಾಣ. ಮುಂಬೈಗೆ ಬಂದ ಮೇಲೆ ಗಲ್ಲಿಗಲ್ಲಿಗಳಲ್ಲಿ ಕ್ರಿಕೆಟ್ ಆಡಿಕೊಂಡಿದ್ದರು. 2006ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಹಿಟ್‌ಮ್ಯಾನ್ 2007ರ ಹೊತ್ತಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದುಕೊಂಡರು. 2007ರ ಜೂನ್ 23ರಂದು ಐರ್ಲೆಂಡ್ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಇದೀಗ ತಮ್ಮ 18 ವರ್ಷಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ತೆರೆ ಎಳೆಯುವ ಸನಿಹದಲ್ಲಿದ್ದಾರೆ.
ರೋಹಿತ್ ಸಾಧನೆ: ಭಾರತದ ಆತಿಥ್ಯದಲ್ಲಿ ನಡೆದ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 11 ಪಂದ್ಯಗಳ ಪೈಕಿ 10ರಲ್ಲಿ ಭಾರತ ವಿಜಯ ಸಾಧಿಸಿತ್ತು. ಈ ವೇಳೆ ರೋಹಿತ್ ಕ್ಯಾಪ್ಟನ್ ಆಗಿದ್ದರು. ಅಲ್ಲದೇ 2024ರಲ್ಲಿ ಭಾರತ ತಂಡಕ್ಕೆ ಟಿ20 ವಿಶ್ವಕಪ್, 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಟ್ಟರು. ಸದ್ಯ ಟಿ20, ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ರೋಹಿತ್, ವಿರಾಟ್ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಮುಂದುವರಿಯುತ್ತಿದ್ದಾರೆ.
