ಉದಯವಾಹಿನಿ, ಲಕ್ನೋ: ಉತ್ತರ ಪ್ರದೇಶದಲ್ಲಿ ಈಗ ಮುಸ್ಲಿಮರೇ ಅಕ್ರಮವಾಗಿ ನಿರ್ಮಾಣಗೊಂಡ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ್ದಾರೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಯಾ ಬುಜುರ್ಗ್ ಗ್ರಾಮದಲ್ಲಿ ಮುಸ್ಲಿಮರು ಭಾನುವಾರ ಗೌಸುಲ್ಬರಾ ಮಸೀದಿಯನ್ನು ನೆಲಸಮ ಮಾಡಿದ್ದಾರೆ.ಅನಧಿಕೃತವಾಗಿ ನಿರ್ಮಾಣಗೊಂಡಿದ್ದ ಮಸೀದಿಯನ್ನು ತೆಗೆಯುವಂತೆ ಜಿಲ್ಲಾಡಳಿತ 4 ದಿನಗಳ ಡೆಡ್‌ಲೈನ್ ನೀಡಿತ್ತು. ಈ ಗಡುವು ಮುಗಿಯುತ್ತಿದ್ದಂತೆ ಮುಸ್ಲಿಮರೇ ಮಸೀದಿಯನ್ನು ಕೆಡವಿದ್ದಾರೆ. ಗೌಸುಲ್ಬರಾ ಮಸೀದಿಯನ್ನು ಕೆಡವಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಮಸೀದಿ ಸಮಿತಿಯ ಸದಸ್ಯರು ನಾವೇ ಈ ಮಸೀದಿಯನ್ನು ಕೆಡವುತ್ತೇವೆ. 4 ದಿನಗಳ ಸಮಯ ನೀಡಿ ಎಂದು ವಿನಂತಿಸಿದ್ದರು.
ಅಕ್ಟೋಬರ್ 2 ರಂದು ಈ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮದುವೆ ಮಂಟಪವನ್ನು ಪೊಲೀಸರ ಸಮ್ಮುಖದಲ್ಲಿ ಅಧಿಕಾರಿಗಳು ಕೆಡವಿ ಹಾಕಿದ್ದರು.
