ಉದಯವಾಹಿನಿ, ಬೆಂಗಳೂರು: ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ  ಹಿನ್ನೆಲೆಯಲ್ಲಿ ಸರ್ಕಾರ ಮಾಡಿದ ಬೆಳೆಹಾನಿ  ಜಂಟಿ ಸಮೀಕ್ಷೆ ಹಾಗೂ ಪರಿಹಾರ ವಿವರಗಳ ಕಂದಾಯ ಇಲಾಖೆ ಮಾಹಿತಿ ನೀಡಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಈವರೆಗೂ ಬಿಡುಗಡೆಯಾದ ಪರಿಹಾರದ ಬಗ್ಗೆ ಮಾಹಿತಿ ನೀಡಿದ್ದಾರೆ.
2025ರ ನೈಋತ್ಯ ಮುಂಗಾರು ಅವಧಿಯಲ್ಲಿ ಸೆಪ್ಟೆಂಬರ್ ಮೊದಲ ವಾರದವರೆಗೆ ಸುರಿದ ಭಾರೀ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆ ಪ್ರದೇಶಗಳು ಜಲಾವೃತಗೊಂಡು ಸುಮಾರು 5.29 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ ಬೆಳೆ ನಷ್ಟವಾಯಿತು. ಬೆಳೆ ಹಾನಿಗೊಂಡ ಜಿಲ್ಲೆಗಳು ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಬೆಳೆ ಹಾನಿ ಪರಿಹಾರ ಪಾವತಿಗೆ ಸಿದ್ಧವಾಗಿದ್ದವು. ಸೆ.ಮಾಹೆಯ ಅಂತ್ಯದಲ್ಲಿ ಸುರಿದ ಭಾರಿ ಮಳೆ ಹಾಗೂ ಮಹಾರಾಷ್ಟ್ರ ಭಾಗದ ಜಲಾಶಯಗಳಿಂದ ಹೊರ ಹರಿಸಲಾದ ನೀರಿನಿಂದಾಗಿ ಉತ್ತರ ಒಳನಾಡಿನ ಭೀಮಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿನ ಪ್ರದೇಶಗಳಲ್ಲಿ ನದಿ ಪ್ರವಾಹ ಉಂಟಾಗಿ ಈ ಭಾಗದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ 4 ಜಿಲ್ಲೆಗಳಲ್ಲಿ ಸುಮಾರು 7.24 ಲಕ್ಷ ಹೆಕ್ಟೇರ್ ಬೆಳೆ ನಷ್ಟಕ್ಕೆ ಕಾರಣವಾಯಿತು ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!