ಉದಯವಾಹಿನಿ, ಬೆಂಗಳೂರು: ಕಳೆದ ವರ್ಷಕ್ಕಿಂತ ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿತ್ತು. ಇನ್ನೇನು ಕೆಲ ದಿನಗಳಲ್ಲಿ ಮುಂಗಾರು ಮುಗಿದು, ಹಿಂಗಾರು ಮಳೆ ಆರಂಭವಾಗಲಿದ್ದು, ಈ ವರ್ಷಾಂತ್ಯದವರೆಗೂ ಜನರಿಗೆ ಮಳೆಕಾಟ ತಪ್ಪಿದ್ದಲ್ಲ.
2025ನೇ ಸಾಲಿನ ನೈಋತ್ಯ ಮುಂಗಾರು ಕೆಲ ದಿನಗಳಲ್ಲಿ ಮುಕ್ತಾಯವಾಗಲಿದ್ದು, ಹಿಂಗಾರು ಮಳೆ ಆರಂಭಗೊಳ್ಳುತ್ತಿದೆ. ಈ ಮುಂಗಾರು ಮಳೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೂ ದಾಖಲೆಗಳ ಪ್ರಕಾರವಿತ್ತು. ಇದುವರೆಗೂ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗಿದೆ. ಈ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ 339 ಸೆಂಟಿ ಮೀಟರ್ ಮುಂಗಾರು ಮಳೆಯಾಗಿದ್ದು, ಸರಾಸರಿಗಿಂತ 14 ಸೆಂಟಿ ಮೀಟರ್ ಹೆಚ್ಚಿನ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಸಾಕಷ್ಟು ಮಳೆ ಅನಾಹುತಗಳು ಈ ವರ್ಷವಾಗಿವೆ.

Leave a Reply

Your email address will not be published. Required fields are marked *

error: Content is protected !!