ಉದಯವಾಹಿನಿ, ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್  ಮುಂಬೈನ ರಾಜಭವನದಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಭೆಯಲ್ಲಿ ವ್ಯಾಪಾರ, ಹೂಡಿಕೆ, ರಕ್ಷಣೆ, ತಾಂತ್ರಿಕ ಸಹಕಾರ ಮತ್ತು ಎರಡೂ ದೇಶಗಳ ನಡುವಿನ ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಒಟ್ಟು 12 ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕಿದರು. ಎರಡೂ ದೇಶಗಳ ನಡುವಿನ ಸಹಯೋಗಕ್ಕಾಗಿ ವಿಷನ್ 2035 ಕಾಲಮಿತಿಯ ಕಾರ್ಯಸೂಚಿಯನ್ನು ಮುನ್ನಡೆಸುವತ್ತ ಗಮನಹರಿಸಿದೆ. ದ್ವಿಪಕ್ಷೀಯ ಒಪ್ಪಂದದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಪ್ರಧಾನಿ ಸ್ಟಾರ್ಮರ್ ಅವರ ನೇತೃತ್ವದಲ್ಲಿ ಭಾರತ ಮತ್ತು ಬ್ರಿಟನ್ ನಡುವಿನ ಸಂಬಂಧಗಳು ಹೊಸ ಎತ್ತರವನ್ನು ತಲುಪಿವೆ ಎಂದು ಹೇಳಿದರು.
ಜುಲೈನಲ್ಲಿ ಬ್ರಿಟನ್‌ಗೆ ಭೇಟಿ ನೀಡಿದಾಗ, ಎರಡೂ ದೇಶಗಳ ನಡುವೆ ಐತಿಹಾಸಿಕ ‘ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ’ (ಸಿಇಟಿಎ)ಕ್ಕೆ ಸಹಿ ಹಾಕಲಾಯಿತು. ಇದು ಭಾರತ-ಬ್ರಿಟನ್ ಪಾಲುದಾರಿಕೆಗೆ ದೊಡ್ಡ ಸಾಧನೆ. ಈ ಸಭೆ ಮತ್ತು ಜಂಟಿ ಹೇಳಿಕೆಯನ್ನು ಎರಡೂ ದೇಶಗಳ ಆರ್ಥಿಕ ಮತ್ತು ಕಾರ್ಯತಂತ್ರದ ಸಂಬಂಧಗಳಿಗೆ ಪ್ರಮುಖ ಹೆಜ್ಜೆ ಎಂದು ಪರಿಗಣಿಸಲಾಗುತ್ತಿದೆ ಎಂದರು.

 

Leave a Reply

Your email address will not be published. Required fields are marked *

error: Content is protected !!