ಉದಯವಾಹಿನಿ, ಲಕ್ನೋ: ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಕನಿಷ್ಟ 6 ಕಾರುಗಳಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ನೋಯ್ಡಾ ಮಾಲ್ ಬಳಿ ನಡೆದಿದೆ. ನೋಯ್ಡಾದ ಮಾಲ್ ಬಳಿ ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ನಿಯಂತ್ರಣ ತಪ್ಪಿ ಕನಿಷ್ಠ ಆರು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಲ್ಯಾಂಡ್ ರೋವರ್ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.
ಸೆಕ್ಟರ್ 129ರ ಗುಲ್ಶನ್ ಒನ್29 ಮಾಲ್ ಹೊರಗೆ ಈ ಘಟನೆ ನಡೆದಿದೆ. ವೇಗವಾಗಿ ಬಂದ ಲ್ಯಾಂಡ್ ರೋವರ್ ಕಾರು 5 ನಾಲ್ಕು ಚಕ್ರದ ವಾಹನಗಳು ಮತ್ತು ಒಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕನನ್ನು ಸೆಕ್ಟರ್ 100ರ ನಿವಾಸಿ ಸುನೀಲ್ ಎಂದು ಗುರುತಿಸಲಾಗಿದ್ದು, ಕಾರು 1111 ಎಂಬ ವಿವಿಐಪಿ ನಂಬರ್ ಪ್ಲೇಟ್ ಹೊಂದಿದೆ.
