ಉದಯವಾಹಿನಿ, ನವದೆಹಲಿ: ದೆಹಲಿಯಲ್ಲಿ ಅ.27ರಿಂದ 30ರವರೆಗೆ ಅಂತಾರಾಷ್ಟ್ರೀಯ ಸೌರ ಒಕ್ಕೂಟ (ISA)ದ 8ನೇ ಅಧಿವೇಶನವನ್ನು ಭಾರತ ಆಯೋಜಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಹಾಗೂ ಐಎಸ್ಎ ಅಧ್ಯಕ್ಷ ಪ್ರಹ್ಲಾದ್‌ ಜೋಶಿ ತಿಳಿಸಿದರು.ಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ನಾಲ್ಕು ದಿನಗಳ ಕಾಲ ನವದೆಹಲಿಯ ಭಾರತ್ ಮಂಟಪದಲ್ಲಿ ಈ ಅಧಿವೇಶನ ಏರ್ಪಡಿಸಿದ್ದು, ಸೌರಶಕ್ತಿ ಉತ್ಪಾದನೆ-ಬಳಕೆ ನಿಟ್ಟಿನಲ್ಲಿ ಜಗತ್ತಿನ ಪ್ರಯತ್ನವನ್ನು ಒಂದೇ ವೇದಿಕೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಹೇಳಿದರು.

ಭಾರತ ಮತ್ತು ಫ್ರಾನ್ಸ್‌ನಿಂದ ಪ್ರಾರಂಭಿಸಲ್ಪಟ್ಟ ISA ಜಾಗತಿಕವಾಗಿ ದಕ್ಷಿಣದ ಅತಿದೊಡ್ಡ ಒಪ್ಪಂದ ಆಧಾರಿತ ಸರ್ಕಾರಿ ಸಂಸ್ಥೆಯಾಗಿದ್ದು, 124 ಸದಸ್ಯ ರಾಷ್ಟ್ರಗಳು ಮತ್ತು ಸಹಿ ಮಾಡಿದ ದೇಶಗಳನ್ನು ಈ ಅಧಿವೇಶನ ಒಟ್ಟುಗೂಡಿಸುತ್ತದೆ ಎಂದರು. 2018ರಲ್ಲಿ ನಡೆದ ಮೊದಲ ISA ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ನೆನಪಿಸಿಕೊಂಡ ಸಚಿವರು, ‘ಒಂದು ಸೂರ್ಯ, ಒಂದು ಪ್ರಪಂಚ, ಒಂದು ಗ್ರಿಡ್’ (OSOWOG) ಅನ್ನು ಮುನ್ನಡೆಸುವ ಮೂಲಕ ಸೌರ ನಿಯೋಜನೆಯನ್ನು ಹೆಚ್ಚಿಸುವಲ್ಲಿ ISA ಪಾತ್ರ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಭಾರತ ವಿಶ್ವಸಾರ್ಹ ಸಾಮರ್ಥ್ಯ ಹೊಂದಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!