ಉದಯವಾಹಿನಿ,ಶಿವಮೊಗ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಕಿರುತೆರೆ ಹಾಗೂ ಚಲನಚಿತ್ರ ನಟಿ ಅನುಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಗಾಯಗೊಂಡು ಅವರು ಸಾಗರದ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾಸ್ಪಾಡಿಯಲ್ಲಿ ಕಿರುತೆರೆ ಮತ್ತು ಚಲನಚಿತ್ರ ನಟಿ ಅನುಗೌಡ ಮೇಲೆ ಮಾರಣಾಂತಿಕ ಹಲ್ಲೆಯನ್ನು ನಡೆಸಲಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕಾಸ್ಪಾಡಿಯ ನಿವಾಸಿಗಳಾದಂತ ನೀಲಮ್ಮ ಮತ್ತು ಮೋಹನ್ ಎಂಬುವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹಲ್ಲೆಗೊಳಗಾದಂತ ನಟಿ ಅನುಗೌಡ ಅವರು ಸಾಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
