ಉದಯವಾಹಿನಿ, ನವದೆಹಲಿ: ಸಹಾಯಕ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ದೆಹಲಿಯ ತೀಸ್ ಹಜಾರಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ವಿಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಮೃತ ದುರ್ದೈವಿಯನ್ನು ರಾಜೇಶ್ ಕುಮಾರ್ ಎಂದು ಗುರುತಿಸಲಾಗಿದೆ. ವಿಡಿಯೊದಲ್ಲಿ, ಕುಮಾರ್ ಬೆಳಿಗ್ಗೆ 9:22 ರ ಸುಮಾರಿಗೆ ನ್ಯಾಯಾಲಯಕ್ಕೆ ಕರ್ತವ್ಯಕ್ಕೆ ಆಗಮಿಸಿದ್ದನ್ನು ಕಾಣಬಹುದು. ಸಹೋದ್ಯೋಗಿಗಳನ್ನು ಸ್ವಾಗತಿಸಿದ ನಂತರ, ಅವರು ಎಸ್ಕಲೇಟರ್ ಕಡೆಗೆ ಹೋದರು. ಆದರೆ, ಈ ವೇಳೆ ಅವರು ಇದ್ದಕ್ಕಿದ್ದಂತೆ ನೆಲಕ್ಕೆ ಕುಸಿದು ಬಿದ್ದರು.

ಕುಸಿದು ಬಿದ್ದ ರಾಜೇಶ್ ಕುಮಾರ್ ಅವರನ್ನು ಗಮನಿಸಿದ ಸಹೋದ್ಯೋಗಿಗಳು ಕೂಡಲೇ ಅವರ ಕಡೆಗೆ ಧಾವಿಸಿ ಅವರನ್ನು ಕರೆದುಕೊಂಡು ಹೋಗುವುದನ್ನು ವಿಡಿಯೊದಲ್ಲಿ ನೋಡಬಹುದು. ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಹೃದಯಾಘಾತದಿಂದ ರಾಜೇಶ್ ಕುಮಾರ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಪಿಟಿಐ ವರದಿಯ ಪ್ರಕಾರ, ಕುಮಾರ್ ಅವರನ್ನು ನ್ಯಾಯಾಲಯದ ಭದ್ರತಾ ಮತ್ತು ತಪಾಸಣಾ ವಿಭಾಗದಲ್ಲಿ ನೇಮಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!