ಉದಯವಾಹಿನಿ, ಮೈಸೂರು: ನಗರದಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿಯ ವಿಕೃತ ಕೃತ್ಯ ಈಗ ಬೆಳಕಿಗೆ ಬಂದಿದೆ. ಬಾಲಕಿಯನ್ನು ರೇಪ್ ಮಾಡಿದ ಬಳಿಕ ಬಹು ಭೀಕರವಾಗಿ ಆಕೆಯನ್ನು ಹತ್ಯೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿದೆ.
‌ಅತಿಯಾದ ಮದ್ಯದ ನಶೆಯಲ್ಲಿ ಆರೋಪಿ ಕಾರ್ತಿಕ್‌ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಭೀಕರವಾಗಿ ಕೊಲೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢವಾಗಿದೆ. ಬಾಲಕಿ ರಸ್ತೆ ಬದಿಯಲ್ಲಿ ಮಲಗಿದ್ದನ್ನು ಗಮನಿಸಿ, ಗಾಢ ನಿದ್ರೆಯಲ್ಲಿದ್ದಾಗ ಆಕೆಯನ್ನು ಹೊತ್ತುಯ್ದು ರೇಪ್ ಮಾಡಿದ್ದ. ನಂತರ ಬಾಲಕಿಯ ಕತ್ತು, ಎದೆ ಭಾಗ ಹಾಗೂ ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಚುಚ್ಚಿದ್ದಾನೆ. ಬಾಲಕಿಯ ಮರ್ಮಾಂಗಕ್ಕೂ ಚಾಕುವಿಂದ ಏಳಂಟು ಬಾರಿ ಚುಚ್ಚಿ ಭೀಕರವಾಗಿ ಕೊಲೆ ಮಾಡಿ ಅಲ್ಲೆ ಸಮೀಪದ ಮೋರಿಗೆ ಶವ ಎಸೆದು ಪರಾರಿ ಆಗಿದ್ದ.
ಬಾಲಕಿ ಹಾಗೂ ಆಕೆಯ ಪೋಷಕರು ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದರು. ಕಳೆದ ಬುಧವಾರ ರಾತ್ರಿ 2 ಗಂಟೆ ಸಮಯದಲ್ಲಿ ಮಲಗಿದ್ದಾಗ ಬಾಲಕಿಯನ್ನು ಆರೋಪಿ ಹೊತ್ತೊಯ್ದು ಕೊಲೆ ಮಾಡಿದ್ದ. ಮೈಸೂರಿನ ಅರಮನೆ ಮುಂಭಾಗದ ಇಟ್ಟಿಗೆಗೂಡಿನ ಖಾಲಿ ಜಾಗದಲ್ಲಿ ಈ ಕೊಲೆ ಆಗಿತ್ತು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮೈಸೂರು ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಕೊಳ್ಳೇಗಾಲದಲ್ಲಿ ಬಂಧಿಸಿದ್ದರು. ಆತನನ್ನು ಮೈಸೂರಿಗೆ ಕರೆತರುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!