ಉದಯವಾಹಿನಿ, ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮಳೆ ಬಂತು ಅಂದ್ರೆ ವಾಹನ ಸವಾರರು ಈಜುವ ಕಲೆ ಕಲಿಯುವ ಅನಿವಾರ್ಯತೆ ಎದುರಾಗಿದೆ. ಒಂದು ದಿನದ ಹಿಂದಷ್ಟೇ 30 ನಿಮಿಷ ಸುರಿದಿದ್ದ ಮಳೆಯಿಂದಾಗಿ ಹಲವು ರಸ್ತೆಗಳು ರಸ್ತೆಗಳು ಜಲಾವೃತಗೊಂಡಿದ್ದವು. ಇಂದು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಬಳಿಕೆ ಹಲವು ರಸ್ತೆಗಳು ಜಲಾವೃತಗೊಂಡಿವೆ.
ಗುಂಡಿ ಬಿದ್ದ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ಕಟ್ಟಿಕೊಂಡಿದ್ದು, ಅಲ್ಲಲ್ಲಿ ವಾಹನಗಳು ಕೆಟ್ಟುನಿಲ್ಲುವಂತಾಗಿದೆ. ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ಚಾಮರಾಜಪೇಟೆ, ಕಾರ್ಪರೇಶನ್, ಲಾಲ್‌ಬಾಗ್ ಸೇರಿದಂತೆ ಬೆಂಗಳೂರಿನ ಪ್ರಮುಖ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇತ್ತ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹೊರವಲಯಗಳಲ್ಲೂ ಮಳೆಯಾಗುತ್ತಿದೆ.

ಗುಂಡಿಬಿದ್ದ ರಸ್ತೆಗಳಲ್ಲಿ ಕಟ್ಟಿಕೊಂಡ ನೀರು: ಬೆಂಗಳೂರಿನ ಹೃದಯ ಭಾಗದಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಗುಂಡಿ ಬಿದ್ದ ರಸ್ತೆಗಳಲ್ಲಿ ಯಾವುದು ಗುಂಡಿ, ಯಾವುದು ರಸ್ತೆ ಅನ್ನೋದೇ ತಿಳಿಯದಾಗಿದೆ. ಫುಟ್ಬಾತ್‌ಗಳ ಮೇಲೂ ನೀರು ತಂಬಿಕೊಂಡಿದೆ. ಹಲವೆಡೆ ಗುಡುಗು ಸಹಿ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರಲ್ಲಿ ಎಲ್ಲೆಲ್ಲಿ ಮಳೆ?: ನಗರದ ಎಲೆಕ್ಟ್ರಾನಿಕ್‌ ಸಿಟಿ, ಮಾನ್ಯತಾ ಟೆಕ್ ಪಾರ್ಕ್ ಸುತ್ತಮುತ್ತ, ಸರ್ಜಾಪುರ, ಮಹದೇವಪುರ, ಪೀಣ್ಯ, ದಾಸರಹಳ್ಳಿ, ಕೋರಮಂಗಲ, ಮಲ್ಲೇಶ್ವರ, ಮೆಜೆಸ್ಟಿಕ್, ಎಲೆಕ್ಟ್ರಾನಿಕ್ ಸಿಟಿ, ವಿಪ್ರೋ ಗೇಟ್, ಸರ್ಜಾಪುರ, ಯಶವಂತಪುರ, ಕಾರ್ಪೋರೇಷನ್, ಬಿಟಿಎಂ ಲೇಔಟ್, ವರ್ತೂರು ಬಳಗೆರೆ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ವಾಹನ ಸವಾರರು ಪರದಾಡಿದ್ದಾರೆ. ಸರ್ಜಾಪುರದಲ್ಲಿ ರಸ್ತೆಯಲ್ಲೇ ನೀರು ನಿಂತು ವಾಹನ ಸವಾರರು ಹಿಡೀ ಶಾಪ ಹಾಕಿದ್ದಾರೆ.

Leave a Reply

Your email address will not be published. Required fields are marked *

error: Content is protected !!