ಉದಯವಾಹಿನಿ, ನವದೆಹಲಿ: ದೀಪಾವಳಿ ಸಮಯದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಎನ್‌ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಲಾಗಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ಪೀಠಕ್ಕೆ ಮನವಿ ಮಾಡಿದರು.
ದೀಪಾವಳಿಯಂದು ರಾತ್ರಿ 8 ರಿಂದ 10 ರವರೆಗೆ ಹಸಿರು ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಬೇಕು. ಇದಕ್ಕಾಗಿ ನಾವು ಹಲವು ಷರತ್ತುಗಳನ್ನು ವಿಧಿಸಿದ್ದೇವೆ. ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ಅನುಮೋದಿಸಿದ ಹಸಿರು ಪಟಾಕಿಗಳನ್ನು ಮಾತ್ರ ತಯಾರಿಸಿ ಮಾರಾಟ ಮಾಡಬೇಕು ಎಂಬುದು ಸೇರಿದಂತೆ ಕೆಲವು ಷರತ್ತುಗಳ ಅಡಿಯಲ್ಲಿ ಪಟಾಕಿಗಳ ಬಳಕೆಗೆ ಅನುಮತಿಸಬಹುದು ಎಂದು ಮನವಿ ಮಾಡಿದರು.
