ಉದಯವಾಹಿನಿ, ನವದೆಹಲಿ: ಕಾಬೂಲ್ ರಾಯಭಾರ ಕಚೇರಿಯನ್ನು 4 ವರ್ಷಗಳ ಬಳಿಕ ಪುನಾರಂಭಿಸಲು ಭಾರತ ನಿರ್ಧರಿಸಿದೆ. ವಿದೇಶಾಂಗ ಸಚಿವ ಜೈಶಂಕರ್ ಮತ್ತು ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ನಿಯೋಗದ ಸಭೆಯ ಬಳಿಕ ಭಾರತ ಈ ಬಗ್ಗೆ ಘೋಷಣೆ ಮಾಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಜೈಶಂಕರ್, ಕಾಬೂಲ್‌ನಲ್ಲಿರುವ ಭಾರತದ ತಾಂತ್ರಿಕ ಮಿಷನ್‌ನ್ನು ಭಾರತದ ರಾಯಭಾರ ಕಚೇರಿಯ ಸ್ಥಾನಮಾನಕ್ಕೆ ಉನ್ನತೀಕರಿಸಲಾಗಿದೆ. ಈ ನಿರ್ಧಾರ ಅಫ್ಘಾನಿಸ್ತಾನದೊಂದಿಗೆ ಭಾರತದ ಸಂಬಂಧವನ್ನು ಗಟ್ಟಿಗೊಳಿಸುವ ನಮ್ಮ ಉದ್ದೇಶವನ್ನು ಎತ್ತಿ ತೋರಿಸುತ್ತದೆ. ಅಲ್ಲದೇ ಇದು ಅಫ್ಘಾನ್ ಜನರು ಮತ್ತು ಅವರ ಭವಿಷ್ಯದ ಬಗ್ಗೆ ಭಾರತದ ಬದ್ಧತೆಯಾಗಿದೆ ಎಂದು ತಿಳಿಸಿದ್ದಾರೆ.
ಭಾರತವು ಅಫ್ಘಾನಿಸ್ತಾನದ ಮೂಲಸೌಕರ್ಯ ಉಪಕ್ರಮಗಳಿಗೆ ಬೆಂಬಲವನ್ನು ನೀಡುತ್ತಿದೆ. ಇದರ ಜೊತೆ ಈಗಾಗಲೇ ನಡೆಯುತ್ತಿರುವ ಇತರ ಯೋಜನೆಗಳನ್ನು ಪೂರ್ಣಗೊಳಿಸುವ ಕ್ರಮಗಳನ್ನು ನಾವು ಚರ್ಚಿಸಬಹುದು. ಇದರ ಜೊತೆ ಭಾರತವು ಆರು ಹೊಸ ಅಭಿವೃದ್ಧಿ ಯೋಜನೆಗಳನ್ನು ಸಹ ಪ್ರಾರಂಭಿಸಲಿದೆ. ಅವುಗಳ ವಿವರಗಳನ್ನು ಮಾತುಕತೆಯ ನಂತರ ಅಂತಿಮಗೊಳಿಸಲಾಗುವುದು.
ಎರಡೂ ರಾಷ್ಟ್ರಗಳು ಗಡಿಯಾಚೆಗಿನ ಭಯೋತ್ಪಾದನೆಯ ಬೆದರಿಕೆ ಎದುರಿಸುತ್ತಿದೆ. ಭಯೋತ್ಪಾದನೆಯನ್ನು ಎದುರಿಸಲು ನಾವು ಪ್ರಯತ್ನ ಮುಂದುವರಿಸಬೇಕು ಎಂದು ಅವರು ಹೇಳಿದರು. ಇದೇ ವೇಳೆ ಪಹಲ್ಗಾಮ್‌ ದಾಳಿಯ ನಡುವೆ ಎರಡು ದೇಶಗಳ ನಡುವಿನ ಸಂಬಂಧ ಹಾಗೂ ಮುಂದುವರಿದಿದ್ದ ವ್ಯಾಪಾರದ ವಿಚಾರ ಚರ್ಚೆಯಾಯಿತು.

Leave a Reply

Your email address will not be published. Required fields are marked *

error: Content is protected !!