ಉದಯವಾಹಿನಿ, ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನಾ ಮಚಾದೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾದ ನಂತರ ವಿವಾದವೊಂದು ಹುಟ್ಟಿಕೊಂಡಿದೆ. ಮರಿಯಾ ಕೊರಿನಾ ಇಸ್ರೇಲ್ ಗಾಜಾ ಮೇಲೆ ನಡೆಸಿದ ಬಾಂಬ್ ದಾಳಿಯನ್ನು ಬೆಂಬಲಿಸಿದ್ದರು ಮತ್ತು ಅವರ ದೇಶದಲ್ಲಿ ಸರ್ಕಾರವನ್ನು ಉರುಳಿಸಲು ವಿದೇಶಿ ಹಸ್ತಕ್ಷೇಪಕ್ಕೂ ಕರೆ ನೀಡಿದ್ದಾರೆ ಎಂಬ ಅಸಮಾಧಾನ ಭುಗಿಲೆದ್ದಿದ್ದೆ.
ಮಚಾಡೊ ವೆನೆಜುವೆಲಾದ ಪ್ರಜಾಪ್ರಭುತ್ವ ಪರ ಚಳುವಳಿಯಲ್ಲಿ ಪ್ರಮುಖ ವ್ಯಕ್ತಿಯಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ನಾಗರಿಕ ಧೈರ್ಯದ ಪ್ರಬಲ ಸಂಕೇತವಾಗಿ ಹೊರಹೊಮ್ಮಿದ್ದಾರೆ. ವೆನೆಜುವೆಲಾದಲ್ಲಿ ಪ್ರಜಾಪ್ರಭುತ್ವವನ್ನು ಉತ್ತೇಜಿಸುವಲ್ಲಿ ಮತ್ತು ಸರ್ವಾಧಿಕಾರದ ವಿರುದ್ಧ ಹೋರಾಡುವಲ್ಲಿ ಅವರ ಕೊಡುಗೆಯನ್ನು ಗುರುತಿಸಿ ನೊಬೆಲ್ ಪ್ರಶಸ್ತಿ ಸಮಿತಿ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಎಂದು ಘೋಷಿಸಿತು.
ಮರಿಯಾ ಕೊರಿನಾಗೆ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದ್ದಕ್ಕಾಗಿ ಅಮೆರಿಕದ ಶ್ವೇತಭವನ ಸಹ ಅಸಮಾಧಾನ ವ್ಯಕ್ತಪಡಿಸಿದ್ದು, ‘ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು’ ಎಂದು ಹೇಳಿದೆ.
ಈ ಬೆಳವಣಿಗೆಗಳ ನಂತರ ಮಚಾಡೊ ತಮ್ಮ ನೊಬೆಲ್ ಪ್ರಶಸ್ತಿಯನ್ನು ಟ್ರಂಪ್‌ಗೆ ಅರ್ಪಿಸಿದರು, ಈ ಬೆನ್ನಲ್ಲೇ ಅಮೆರಿಕ ಅಧ್ಯಕ್ಷರು ಮರಿಯಾ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಭಾಜನರಾಗಿದ್ದಕ್ಕಾಗಿ ಸಂತೋಷಪಡುವುದಾಗಿ ಹೇಳಿದ್ದರು.
ಸರ್ವಾಧಿಕಾರದ ನಡುವೆ ವೆನೆಜುವೆಲಾದಲ್ಲಿ ಪ್ರಜಾಪ್ರಭುತ್ವವನ್ನು ಜೀವಂತವಿರಿಸುವ ಕೆಲಸ ಮಾಡಿರುವ “ಶಾಂತಿಯ ಚಾಂಪಿಯನ್” ಎಂದು ನೊಬೆಲ್ ಪ್ರಶಸ್ತಿ ಸಮಿತಿ ಮಚಾದೊ ಅವರನ್ನು ಶ್ಲಾಘಿಸಿದೆ. ಸಮಿತಿಯ ಅಧ್ಯಕ್ಷರಾದ ಜೋರ್ಗೆನ್ ವ್ಯಾಟ್ನೆ ಫ್ರೈಡ್ನೆಸ್, ಮಚ್ಹಾಡೊ ಅವರನ್ನು ಒಂದು ಕಾಲದಲ್ಲಿ ವಿಭಜನೆಯಾಗಿದ್ದ ವೆನೆಜುವೆಲಾದಲ್ಲಿ “ರಾಜಕೀಯ ವಿರೋಧದ ನಡುವೆಯೂ ಪ್ರಮುಖ ಒಗ್ಗೂಡಿಸುವ ವ್ಯಕ್ತಿ” ಎಂದು ಬಣ್ಣಿಸಿದ್ದಾರೆ.
