ಉದಯವಾಹಿನಿ, ನಟಿ ನತಾಶಾ ಅವರಿಂದ ವಿಚ್ಛೇದನ ಪಡೆದು ದೀರ್ಘಕಾಲದ ಬಳಿಕ ಮತ್ತೆ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಲವ್‌ನಲ್ಲಿ ಬಿದ್ದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗಳು ಹುಟ್ಟಿಕೊಳ್ತಿದ್ದಂತೆ ಇನ್‌ಸ್ಟಾದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಪಾಂಡ್ಯ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಜೊತೆಗೆ ತಮ್ಮ ಹೊಸ ಗರ್ಲ್‌ಫ್ರೆಂಡ್ ಯಾರು ಅನ್ನೋದನ್ನೂ ಬಹಿರಂಗಪಡಿಸಿದ್ದಾರೆ.
ಟಿ20 ಏಷ್ಯಾಕಪ್ ಟೂರ್ನಿ ಬಳಿಕ ರಿಲ್ಯಾಕ್ಸ್ ಮೂಡ್‌ನಲ್ಲಿರುವ ಪಾಂಡ್ಯ, ಹೊಸ ಗರ್ಲ್‌ಫ್ರೆಂಡ್ ಮಹೀಕಾ ಶರ್ಮಾ ಅವರೊಂದಿಗೆ ಹಾಲಿಡೇಸ್ ಎಂಜಾಯ್ ಮಾಡ್ತಿದ್ದಾರೆ. ಈ ವೇಳೆ ಬೀಚ್ ಎದುರು ಹಾಗೂ ನೈಟ್ ಔಟ್ ವೇಳೆ ತೆಗೆದ ಫೋಟೋಗಳನ್ನ ಪಾಂಡ್ಯ ಹಂಚಿಕೊಂಡಿದ್ದು, ಮಹೀಕಾ ಅವರಿಗೂ ಟ್ಯಾಗ್ ಮಾಡಿದ್ದಾರೆ.
ಮೊದಲ ಫೋಟೋದಲ್ಲಿ ಪಾಂಡ್ಯ, ಮಹೀಕಾ ಅವರ ಹೆಗಲ ಮೇಲೆ ರೊಮ್ಯಾಂಟಿಕ್ ಆಗಿ ಕೈ ಹಾಕಿಕೊಂಡಿದ್ದಾರೆ. ಮತ್ತೊಂದು ಫೋಟೋದಲ್ಲಿ ಇಬ್ಬರು ನೈಟ್‌ಔಟ್‌ನಲ್ಲಿ ಕಾಲ ಕಳೆಯುತ್ತಿದ್ದಾರೆ. ಮಹೀಕಾ ಹಾಟ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ರೆ, ಪಾಂಡ್ಯ ಸಿಂಪಲ್ಲಾಗಿ ಡ್ರೆಸ್ ಮಾಡಿಕೊಂಡಿದ್ದಾರೆ. ಫೋಟೋಗಳಿಗೆ ಪಾಂಡ್ಯ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಯಾರು ಈ ಬ್ಯೂಟಿ?
ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿರುವ ಮಹೀಕಾ ಶರ್ಮಾ, ಫ್ಯಾಷನ್ ಉದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಐಎಫ್‌ಎ ಮಾಡೆಲ್ ಆಫ್ ದಿ ಇಯರ್ ಹಾಗೂ ಎಲ್ಲೆ ಮಾಡೆಲ್ ಆಫ್ ದಿ ಸೀಸನ್ ಪ್ರಶಸ್ತಿಗಳನ್ನು ಮಹೀಕಾ ಮುಡಿಗೇರಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ಮಹೀಕಾ ಶರ್ಮಾ ಇನ್‌ಸ್ಟಾದಲ್ಲಿ 1.47 ಲಕ್ಷ ಫಾಲೋವರ್ಸ್ ಹೊಂದಿದ್ದಾರೆ
