ಉದಯವಾಹಿನಿ, ಬೆಂಗಳೂರು: ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲಾ ಚಟುವಟಿಕೆಗಳನ್ನು ಸರ್ಕಾರ ನಿಷೇಧಿಸುತ್ತಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ. ಹೌದು. ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದಾರೆ.
ಪ್ರಿಯಾಂಕ್ ಖರ್ಗೆ ಬರೆದ ಪತ್ರವನ್ನು ಸಿದ್ದರಾಮಯ್ಯನವರು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕಳುಹಿಸಿ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸೂಚಿಸಿದ್ದಾರೆ. ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸುವಂತೆ ಸರ್ಕಾರ ಇನ್ನೂ ಯಾವುದೇ ಆದೇಶ ಪ್ರಕಟಿಸಿಲ್ಲ. ಒಂದು ವೇಳೆ ಆದೇಶ ಪ್ರಕಟಿಸಿದರೆ ಅಧಿಕೃತವಾಗಿ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಟಿ ಚಟುವಟಿಕೆಗಳಿಗೆ ಬ್ರೇಕ್ ಬೀಳಲಿದೆ.
