ಉದಯವಾಹಿನಿ, ಬೆಳಗಾವಿ: ಜಿಲ್ಲೆಯಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿರುವ ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. 16 ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣಾ ಕಣದಲ್ಲಿ ಘಟಾನುಘಟಿ ನಾಯಕರೇ ಅಖಾಡಕ್ಕೆ ಇಳಿದಿದ್ದಾರೆ. ಆರಂಭದ ಹಂತದಲ್ಲೇ ಜಾರಕಿಹೊಳಿ ಬ್ರದರ್ಸ್ ) ಗುಂಪು ಮೆಲುಗೈ ಸಾಧಿಸಿದೆ.ಅ.19 ರಂದು ನಡೆಯಲಿರುವ ಮತದಾನಕ್ಕೆ ಈ ವರೆಗೂ ಒಟ್ಟು 64 ನಾಮಪತ್ರ ಸಲ್ಲಿಕೆಯಾಗಿವೆ. ಈ ಪೈಕಿ ಆರು ತಾಲೂಕಿನಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದು ಆರಂಭದಲ್ಲೇ ಜಾರಕಿಹೊಳಿ ಗುಂಪು ಮೇಲುಗೈ ಸಾಧಿಸಿದೆ.
ಹಾಲಿ, ಮಾಜಿ ಶಾಸಕರು ಸೇರಿದಂತೆ ಮಾಜಿ ಸಂಸದರು ಕೂಡ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದಾರೆ. ಅದರಲ್ಲೂ ಈಗಾಗಲೇ ಜಾರಕಿಹೊಳಿ ಬ್ರದರ್ಸ್ 13 ಜನರ ತಂಡವನ್ನು ಸಿದ್ಧಪಡಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಥಣಿ, ಕಾಗವಾಡ ಮತ್ತು ಚಿಕ್ಕೋಡಿ ತಾಲೂಕಿನಲ್ಲಿ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಬೇರೆ ಕಡೆಗಳಲ್ಲಿ ತಮ್ಮವರನ್ನು ಅಖಾಡಕ್ಕಿಳಿಸಿದ್ದಾರೆ.
ರಮೇಶ್ ಕತ್ತಿ ಮತ್ತು ಲಕ್ಷ್ಮಣ ಸವದಿ ನಡೆ ಇನ್ನೂ ನಿಗೂಢವಾಗಿದ್ದು ಜಾರಕಿಹೊಳಿ ಸಹೋದರರಿಗೆ ಶಾಕ್ ಕೊಡಲು ಮಾಸ್ಟರ್ ಪ್ಲ್ಯಾನ್ ಮಾಡ್ತಿದ್ದಾರೆ. ಸದ್ಯ ಆರಂಭಿಕ ಹಂತದಲ್ಲಿ ಜಾರಕಿಹೊಳಿ ಬ್ರದರ್ಸ್ ಮೇಲುಗೈ ಸಾಧಿಸಿದ್ದು ಆರು ತಾಲೂಕಿನ ಪೈಕಿ ಐದು ಜಾರಕಿಹೊಳಿ ಬ್ರದರ್ಸ್ ಗುಂಪಿನವರು ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!