ಉದಯವಾಹಿನಿ, ಕೋಲ್ಕತ್ತಾ: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್‌ ರೇಪ್‌ ಪ್ರಕರಣದ ಕುರಿತು ಮೊದಲ ಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಚ್ಚರಿ ಹೇಳಿಕೆ ನೀಡಿದ್ದಾರೆ. ತಡರಾತ್ರಿ 12:30ಕ್ಕೆ ಹೇಗೆ ಅವಳು ಹೊರಗೆ ಬಂದಳು? ಅಂತ ರೇಪ್‌ ಸಂತ್ರಸ್ತೆ ಕುರಿತು ಪ್ರಶ್ನೆ ಮಾಡಿದರಲ್ಲದೇ, ಹುಡುಗಿಯರನ್ನ ರಾತ್ರಿ ಹೊತ್ತು ಹೊರಗೆ ಬಿಡದಂತೆ ಖಾಸಗಿ ಕಾಲೇಜುಗಳು ಜವಾಬ್ದಾರಿ ವಹಿಸಬೇಕು ಎಂದು ತಾಕೀತು ಮಾಡಿದರು.
ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ದೀದಿ, ಕತ್ತಲಾದ ನಂತ್ರ ಹೆಣ್ಣುಮಕ್ಕಳು ಹೊರಗೆ ಹೋಗುವುದನ್ನ ತಡೆಯಬೇಕು ಎಂದು ಹೇಳಿದ್ರು. ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಬಿಜೆಪಿ ಸೇರಿದಂತೆ ವಿಪಕ್ಷಗಳಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ವಿದ್ಯಾರ್ಥಿನಿ ಖಾಸಗಿ ಖಾಲೇಜಿನಲ್ಲಿ ಓದುತ್ತಿದ್ದಳು, ಹಾಗಾದ್ರೆ ಅದು ಯಾರ ಜವಾಬ್ದಾರಿ? ತಡರಾತ್ರಿ 12.30ಕ್ಕೆ ಅವಳು ಹೇಗೆ ಹೊರಬಂದಳು? ಎಂದು ಕಳವಳ ವ್ಯಕ್ತಪಡಿಸಿದರಲ್ಲದೇ, ಈಗ ಕೃತ್ಯ ಎಸಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಯಾರನ್ನೂ ಕ್ಷಮಿಸುವ ಮಾತೇ ಇಲ್ಲ, ಪೊಲೀಸರು ಎಲ್ಲ ಕಡೆ ಹುಡುಕುತ್ತಿದ್ದಾರೆ ಎಂದು ತಿಳಿಸಿದ್ರು.
ಮುಂದುವರಿದು.. ಖಾಸಗಿ ವೈದ್ಯಕೀಯ ಕಾಲೇಜುಗಳು ತಮ್ಮ ತಮ್ಮ ವಿದ್ಯಾರ್ಥಿಗಳ ಬಗ್ಗೆ ಜವಾಬ್ದಾರಿ ವಹಿಸಬೇಕು, ರಾತ್ರಿ ಸಂಸ್ಕೃತಿಯ ಬಗ್ಗೆ ಎಚ್ಚರ ವಹಿಸಬೇಕು. ಹೆಣ್ಣುಮಕ್ಕಳನ್ನ ರಾತ್ರಿಯಲ್ಲಿ ಹೊರಗೆ ಹೋಗಲು ಬಿಡಬಾರದು. ಮೊದಲು ತಮ್ಮನ್ನ ತಾವು ರಕ್ಷಿಸಿಕೊಳ್ಳಬೇಕು. ಏಕೆಂದ್ರೆ ಇದು ಅರಣ್ಯ ಪ್ರದೇಶ ಎಂದು ಹೇಳಿದ್ರು.

 

Leave a Reply

Your email address will not be published. Required fields are marked *

error: Content is protected !!