ಉದಯವಾಹಿನಿ, ಹಿಂದೆಯೆಲ್ಲ ಹಣಕಾಸಿನ ವ್ಯವಹಾರ ಹೆಚ್ಚಾಗಿ ನಗದು ರೂಪದಲ್ಲೇ ನಡೆಯುತ್ತಿತ್ತು. ಆಗ ಕಳ್ಳರು ಮನೆಗಳಿಗೆ ನುಗ್ಗಿ ಅಥವಾ ದಾರಿಯಲ್ಲಿ ಹೋಗುವವರನ್ನು ಅಡ್ಡಗಟ್ಟಿ ಸುಲಿಗೆ ಮಾಡುವವರ ಸಂಖ್ಯೆಯೂ ಹೆಚ್ಚಾಗಿತ್ತು (ಈಗಲೂ ಇದೆ. ಪ್ರಮಾಣ ಕಡಿಮೆ). ಆದರೆ ಈಗ ನಗದು ವಹಿವಾಟು ಕಡಿಮೆಯಾಗಿದೆ. ಡಿಜಿಟಲ್ ವ್ಯವಹಾರ ಹೆಚ್ಚಾಗಿದೆ. ಕಳ್ಳರು ಸಹ ಹೊಸ ತಂತ್ರಜ್ಞಾನಕ್ಕೆ ತಕ್ಕಂತೆ ತಮ್ಮ ಕುಕೃತ್ಯದ ಪರಿಯನ್ನು ಬದಲಾಯಿಸಿಕೊಂಡಿದ್ದಾರೆ. ಎಲ್ಲೆಡೆ ಸೈಬರ್ ವಂಚಕರ ಜಾಲ ಆವರಿಸಿದೆ. ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ಕಳ್ಳತನಕ್ಕೆ ಇಳಿದಿದ್ದಾರೆ. ಜನರ ‘ಡಿಜಿಟಲ್ ಪರ್ಸ್’ಗೆ ಕೈ ಹಾಕಿ ಹಣ ದೋಚುತ್ತಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಭಾರತದಲ್ಲಿ ಸೈಬರ್ ವಂಚಕರ ಜಾಲಕ್ಕೆ ಬಿದ್ದು ಹಣ ಕಳೆದುಕೊಳ್ಳುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆ ಕಂಡಿದೆ. ದೇಶದ ಪ್ರಮುಖ ನಗರಗಳಲ್ಲಿ ಕರ್ನಾಟಕದ ಬೆಂಗಳೂರು ಸೈಬರ್ ಕ್ರೈಮ್ ಹಬ್ ಆಗಿದೆ. ದೇಶದ ಇತರೆ ನಗರಗಳಿಗೆ ಹೋಲಿಸಿದರೆ, ಬೆಂಗಳೂರು (Bengaluru) ನಂ.1 ಸ್ಥಾನದಲ್ಲಿರುವುದು ಆತಂಕಕಾರಿ ಸುದ್ದಿ.

ಭಾರತದಲ್ಲಿ ದಿನಕ್ಕೆ ಸರಾಸರಿ 7,000 ಸೈಬರ್ ಅಪರಾಧ (Cyber Crime) ದೂರುಗಳು ದಾಖಲಾಗುತ್ತಿವೆ. ಈ ಸಂಖ್ಯೆ 2021 ರಿಂದ ಗಮನಾರ್ಹವಾಗಿ ಹೆಚ್ಚಾಗಿದೆ. ಈ ಪ್ರಕರಣಗಳಲ್ಲಿ ಸುಮಾರು 85% ಕೇಸ್‌ಗಳು ಆನ್‌ಲೈನ್ ಹಣಕಾಸು ವಂಚನೆಗೆ ಸಂಬಂಧಿಸಿವೆ. ಈ ದೂರುಗಳಲ್ಲಿ ಸರಿಸುಮಾರು 85% ಆನ್‌ಲೈನ್ ಹಣಕಾಸು ವಂಚನೆಗೆ ಸಂಬಂಧಿಸಿದೆ. ಹೂಡಿಕೆ ವಂಚನೆಗಳು, ಗೇಮಿಂಗ್ ಅಪ್ಲಿಕೇಶನ್‌ಗಳು, ಅಕ್ರಮ ಸಾಲ ನೀಡುವ ಅಪ್ಲಿಕೇಶನ್‌ಗಳು ಮತ್ತು OTP ವಂಚನೆಗಳು ಕೂಡ ಕೇಸ್‌ಗಳಲ್ಲಿ ಸೇರಿವೆ. 2024ರ ಮೊದಲ ನಾಲ್ಕು ತಿಂಗಳಲ್ಲಿ ಜನರಿಂದ ಸೈಬರ್ ವಂಚಕರು 1,750 ಕೋಟಿಗೂ ಹೆಚ್ಚು ಹಣವನ್ನು ಲಪಟಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!