ಉದಯವಾಹಿನಿ,ಹುಬ್ಬಳ್ಳಿ: ಬೆಂಗಳೂರು-ಧಾರವಾಡ ಮಧ್ಯ ಹೊಸದಾಗಿ ಆರಂಭವಾದ ವಂದೇ ಭಾರತ್ ರೈಲಿನ ಸಮಯಕ್ಕೆ ಹೊಂದಾಣಿಕೆ ಆಗುವಂತೆ ಕೆಲ ಬಸ್‌ಗಳ ಸೇವೆ ಒದಗಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ತಿಳಿಸಿದೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದ ನಡುವೆ ವೋಲ್ವೋ ಬಸ್ ಹಾಗೂ ಧಾರವಾಡ ರೈಲು ನಿಲ್ದಾಣದಿಂದ ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ರಾಜಹಂಸ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗಾವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪ್ರಯಾಣಿಕರಿಗೆ ಬೆಂಗಳೂರು-ಧಾರವಾಡ ನಡುವೆ ಆರಂಭಿಸಲಾಗಿರುವ ವಂದೇ ಭಾರತ್ ರೈಲಿನಲ್ಲಿ ಪ್ರಯಾಣ ಮಾಡಲು ಅನುಕೂಲ ಕಲ್ಪಿಸಲಾಗಿದೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಮಲ್ಟಿ ಆ್ಯಕ್ಸೆಲ್ ವೋಲ್ವೊ ಎಸಿ ಬಸ್ ಹಾಗೂ ಧಾರವಾಡ ರೈಲು ನಿಲ್ದಾಣಕ್ಕೆ ರಾಜಹಂಸ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ರೈಲಿನ ಆಗಮನ-ನಿರ್ಗಮನ ಸಮಯಕ್ಕೆ ಅನುಗುಣವಾಗಿ ಈ ಬಸ್‌ಗಳು ವೇಳಾಪಟ್ಟಿ ನಿಗದಿಪಡಿಸಲಾಗಿದೆ.
