ಉದಯವಾಹಿನಿ, ಟೆಲ್‌ಅವಿವ್: ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಬೆನ್ನಲ್ಲೇ ಮೊದಲ ಹಂತವಾಗಿ ಇಸ್ರೇಲ್‌ನ 7 ಮಂದಿ ಒತ್ತೆಯಾಳುಗಳನ್ನ ಹಮಾಸ್ ಬಿಡುಗಡೆ ಮಾಡಿದೆ.
ಇಸ್ರೇಲ್-ಹಮಾಸ್ ಕದನ ವಿರಾಮದ ಭಾಗವಾಗಿ ಮೊದಲ ಹಂತದಲ್ಲಿ 7 ಒತ್ತೆಯಾಳುಗಳನ್ನು ಹಮಾಸ್ ರೆಡ್‌ಕ್ರಾಸ್‌ಗೆ ಹಸ್ತಾಂತರಿಸಿದೆ. ಆದರೆ ಅವರ ಸದ್ಯದ ಸ್ಥಿತಿಯ ಬಗ್ಗೆ ಮಾಹಿತಿ ಇಲ್ಲ. ಜೊತೆಗೆ ಇಸ್ರೇಲ್ ವಶದಲ್ಲಿರುವ 1,900ಕ್ಕೂ ಹೆಚ್ಚು ಪ್ಯಾಲೆಸ್ತೀನ್ ಕೈದಿಗಳಿಗೆ ಬದಲಾಗಿ 20 ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಳ್ಳಲಾಗುವುದು ಎಂದು ಹಮಾಸ್ ಹೇಳಿದೆ. ಅದರಂತೆ 20 ಮಂದಿ ಪೈಕಿ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಲಾಗಿದೆ.
ಹಮಾಸ್ ಬಿಡುಗಡೆಗೊಳಿಸಿರುವ ಒತ್ತೆಯಾಳುಗಳು ಸದ್ಯ ರೆಡ್‌ಕ್ರಾಸ್ ನಿಯಂತ್ರಣದಲ್ಲಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ಬಹಿರಂಗಪಡಿಸಿದ್ದು, ಒತ್ತೆಯಾಳುಗಳ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಗಾಜಾದಲ್ಲಿ ಯುದ್ಧ ಅಂತ್ಯಗೊಂಡು, ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಹಮಾಸ್ ಒತ್ತೆಯಾಳುಗಳ ಬಿಡುಗಡೆಗೂ ಮುನ್ನ ಟ್ರಂಪ್ ಪಶ್ಚಿಮ ಏಷ್ಯಾಕ್ಕೆ ತೆರಳಿದ್ದಾರೆ. ಇದಕ್ಕೂ ಮುನ್ನ ಏರ್‌ಫೋರ್ಸ್ ಒನ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಮುಗಿದಿದೆ ಎಂದು ತಿಳಿಸಿದ್ದರು.
