ಉದಯವಾಹಿನಿ, ಬೆಂಗಳೂರು: ಆಗಾಗ್ಗೆ ಶಾಲೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಬರುತ್ತಿವೆ. ಇತ್ತೀಚೆಗಷ್ಟೇ ಸಿಎಂ, ಡಿಸಿಎಂ ಮನೆಗಳನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಬಂದಿತ್ತು. ಈ ಬೆನ್ನಲ್ಲೇ ಎಚ್ಚೆತ್ತಿರುವ ಪೊಲೀಸ್‌ ಇಲಾಖೆ ಬಾಂಬ್‌ ಬೆದರಿಕೆ ಪ್ರಕರಣಗಳನ್ನ ಭೇದಿಸಲು ವಿಶೇಷ ತನಿಖಾ ತಂಡ (SIT) ರಚನೆ ಮಾಡಿದೆ.
ಕೆಲ ಶಾಲೆಗಳು, ಸರ್ಕಾರಿ ಕಚೇರಿಗಳಿಗೆ ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಬಾಂಬ್‌ ಬೆದರಿಕೆ (Bomb Threat) ಬರುತ್ತಲೇ ಇದೆ. ಬೆಂಗಳೂರು ಒಂದರಲ್ಲೇ 34 ಪ್ರಕರಣಗಳು ದಾಖಲಾಗಿವೆ. ಮುಂಬೈನಲ್ಲಿ 27, ಚೆನ್ನೈ 22 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಬಾಂಬ್‌ ಬೆದರಿಕೆಗಳನ್ನು ತಪ್ಪಿಸಲು ಹಾಗೂ ಹುಸಿ ಬೆದರಿಕೆಯೊಡ್ಡುವವರ ಹೆಡೆಮುರಿ ಕಟ್ಟಲು ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ತನಿಖಾ ತಂಡ ರಚನೆ ಮಾಡಿದ್ದಾರೆ.
ಕಳೆದ ಶನಿವಾರ ಸಿಎಂ ಮತ್ತು ಡಿಸಿಎಂ ಮನೆಗಳಲ್ಲಿ 4 ಕೆಜಿಯಷ್ಟು ಆರ್‌ಡಿಎಕ್ಸ್ ಮತ್ತು ಐಇಡಿ ಸ್ಫೋಟಕ ಇರಿಸಲಾಗಿದೆ. ಅವುಗಳನ್ನು ದೂರದಿಂದಲೇ ಸ್ಫೋಟಿಸಲಾಗುತ್ತದೆ ಎಂದು ಇ-ಮೇಲ್‌ ಮೂಲಕ ಹುಸಿ ಬೆದರಿಕೆ ಬಂದಿತ್ತು. ಶನಿವಾರ ಬೆಳಗಿನ ಜಾವ 4:20ರ ಸುಮಾರಿಗೆ, ಆರ್ನಾ ಅಶ್ವಿನ್ ಶೇಖರ್ (aarna.ashwinshekher@outlook.com) ಮೇಲ್ ಐಡಿಯಿಂದ ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ಇಮೇಲ್ ಐಡಿ (cm.kar@nic.in) ಮತ್ತು ಡಿಸಿಎಂ ಅವರ ವೈಯಕ್ತಿಕ ಇಮೇಲ್ ಐಡಿ dkshivakumar1@gmail.com ಗೆ ಇಮೇಲ್ ಬೆದರಿಕೆ ಸಂದೇಶ ಬಂದಿತ್ತು.ಇದರ ನಂತರ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದೊಂದಿಗೆ ಸಿಎಂ ಮತ್ತು ಡಿಸಿಎಂ ಅವರ ನಿವಾಸಗಳನ್ನು ಸಂಪೂರ್ಣ ಶೋಧ ನಡೆಸಲಾಗಿತ್ತು. ಬಳಿಕ ಹುಸಿ ಬಾಂಬ್‌ ಬೆದರಿಕೆ ಅನ್ನೋದು ಗೊತ್ತಾಯ್ತು. ಬಳಿಕ ಅರ್ನಾ ಅಶ್ವಿನ್ ಶೇಖರ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಬೆನ್ನಲ್ಲೇ ಎಸ್‌ಐಟಿ ರಚಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!