ಉದಯವಾಹಿನಿ, ಜೆರುಸಲೇಮ್‌/ಟೆಲ್‌ ಅವಿವ್: 2023ರ ಅಕ್ಟೋಬರ್‌ 7ರಂದು ಹಮಾಸ್‌ ದಾಳಿ ನಡೆಸುವ 3 ವಾರಗಳಿಗೆ ಮೊದಲೇ ಇಸ್ರೇಲ್‌ಗೆ ತೆರಳಿದ್ದ ನೇಪಾಳದ ಕೃಷಿ ವಿದ್ಯಾರ್ಥಿ ಬಿಪಿನ್‌ ಜೋಶಿ ಮೃತಪಟ್ಟಿದ್ದಾರೆ ಎಂದು ಹಮಾಸ್‌ ದೃಢಪಡಿಸಿದೆ. ಬದುಕುಳಿದ ಎಲ್ಲರನ್ನ ಇಸ್ರೇಲ್‌ಗೆ ಹಸ್ತಾಂತರಿಸಿದೆ. ಇದರೊಂದಿಗೆ ಬಿಪಿನ್‌ ಜೋಶಿ ಮೃತಪಟ್ಟ ವಿಷಯ ಖಚಿತಪಡಿಸಿದ್ದು, ಮೃತದೇಹವನ್ನ ಇಸ್ರೇಲ್‌ಗೆ ಹಸ್ತಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಹೌದು. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಈಜಿಪ್ಟ್‌ನಲ್ಲಿ ನಡೆದ ಶಾಂತಿ ಒಪ್ಪಂದದ ನಂತರ ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಎರಡು ವರ್ಷಗಳ ಸುದೀರ್ಘ ಯುದ್ಧ ಅಧಿಕೃತವಾಗಿ ಅಂತ್ಯಗೊಂಡಿದೆ. ಹೀಗಾಗಿ ಎಲ್ಲ 20 ಒತ್ತೆಯಾಳುಗಳನ್ನ ಹಮಾಸ್‌ ಬಿಡುಗಡೆ ಮಾಡಿದೆ.

ಇದೇ ವೇಳೆ 2 ವರ್ಷಗಳ ಹಿಂದೆ ಹಮಾಸ್ ಅಪಹರಿಸಿದ್ದ ನೇಪಾಳದ ಹಿಂದೂ ವಿದ್ಯಾರ್ಥಿ ಬಿಪಿನ್ ಜೋಶಿ ಅವರ ದೇಹವನ್ನ ಇಸ್ರೇಲ್‌ಗೆ ಹಿಂತಿರುಗಿಸಲಾಗಿದೆ. ಈ ಕುರಿತು ಇಸ್ರೇಲ್‌ನಲ್ಲಿರುವ ನೇಪಾಳದ ರಾಯಭಾರಿ ಧನ ಪ್ರಸಾದ್ ಪಂಡಿತ್ ಮಾಹಿತಿ ನೀಡಿದ್ದಾರೆ. ಬಿಪಿನ್ ಜೋಶಿಯವರ ಮೃತದೇಹವನ್ನ ಹಮಾಸ್ ಇಸ್ರೇಲಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದು, ಅದನ್ನು ಟೆಲ್ ಅವೀವ್‌ಗೆ ಕೊಂಡೊಯ್ಯಲಾಗುತ್ತಿದೆ ಎಂದಿದ್ದಾರೆ.

ನೇಪಾಳಕ್ಕೆ ಹಸ್ತಾಂತರಕ್ಕೂ ಮುನ್ನ ಡಿಎನ್‌ಎ ಟೆಸ್ಟ್‌
ಜೋಶಿಯವರ ಮೃತದೇಹವನ್ನ ನೇಪಾಳಕ್ಕೆ ವಾಪಸ್ ಕಳುಹಿಸುವ ಮೊದಲು ಡಿಎನ್‌ಎ (DNA) ಪರೀಕ್ಷೆ ನಡೆಸಿ, ನೇಪಾಳಿ ರಾಯಭಾರ ಕಚೇರಿಯ ಸಮನ್ವಯದೊಂದಿಗೆ ಇಸ್ರೇಲ್‌ನಲ್ಲಿ ಅಂತಿಮ ವಿಧಿವಿಧಾನ ನಡೆಸಲಾಗುವುದು ಎಂದು ಇಸ್ರೇಲ್‌ ಮಿಲಿಟರಿ ಹೇಳಿದೆ.

Leave a Reply

Your email address will not be published. Required fields are marked *

error: Content is protected !!