ಉದಯವಾಹಿನಿ, ಆಧುನಿಕ ರೈತ, ‘ಬಿಗ್ ಬಾಸ್ ಕನ್ನಡ ಸೀಸನ್ 6’ ವಿಜೇತ ಶಶಿ ಅವರು ನಟನೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಅವರು ನಟಿಸಿರುವ ಹೊಸ ಸಿನಿಮಾದ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ಲಿವ್ ಇನ್ ರಿಲೀಶನ್​ಶೀಪ್ ಕಹಾನಿ ಇರುವ ಸಿನಿಮಾದಲ್ಲಿ ಶಶಿ ಅವರು ಅಭಿನಯಿಸಿದ್ದಾರೆ. ಈ ಸಿನಿಮಾಗೆ ‘ಪ್ರೇಮಿಗಳ ಗಮನಕ್ಕೆ’ ಎಂದು ಶೀರ್ಷಿಕೆ ಇಡಲಾಗಿದೆ. ‘ಸಿಟಾಡೆಲ್ ಫಿಲ್ಮ್ಸ್​’ ಮತ್ತು ‘ಜೊಯಿಟಾ ಎಂಟರ್‌ಟೈನ್‌ಮೆಂಟ್ಸ್’ ಮೂಲಕ ಈ ಸಿನಿಮಾ ಸಿದ್ಧವಾಗಿದೆ. ಸುಬ್ಬು ಮತ್ತು ಯಕ್ಕಂಟಿ ರಾಜಶೇಖರ ರೆಡ್ಡಿ ಅವರು ‘ಪ್ರೇಮಿಗಳ ಗಮನಕ್ಕೆ’ ಸಿನಿಮಾವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಯಿತು.
ನಗರ ಪ್ರದೇಶಗಳಲ್ಲಿ ಲಿವ್ ಇನ್ ರಿಲೇಶನ್‌ಶಿಪ್ ಹೆಚ್ಚಾಗುತ್ತಿದೆ. ಐಟಿ, ಬಿಟಿ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಲ್ಲಿ ಈ ರೀತಿಯ ಸಂಬಂಧಗಳು ಹೆಚ್ಚಾಗಿ ಕಂಡುಬರುತ್ತದೆ. ಯುವಕ-ಯುವತಿಯರು ಮದುವೆಯಾಗದೇ ಒಂದೇ ಮನೆಯಲ್ಲಿ ವಾಸಿಸುವುದಕ್ಕೆ ಲಿವ್ ಇನ್ ರಿಲೀಶನ್​ಶೀಪ್ ಎನ್ನುತ್ತಾರೆ. ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಈ ರೀತಿ ಒಟ್ಟಿಗೆ ವಾಸವಿದ್ದ ಪ್ರೇಮಿಗಳ ಕಹಾನಿಯನ್ನು ‘ಪ್ರೇಮಿಗಳ ಗಮನಕ್ಕೆ’ ಸಿನಿಮಾದಲ್ಲಿ ತೋರಿಸಲಾಗುತ್ತಿದೆ.

ಶೀಘ್ರದಲ್ಲೇ ಈ ಸಿನಿಮಾ ಬಿಡುಗಡೆ ಆಗಲಿದೆ. ಈಗ ಟ್ರೇಲರ್ ಮೂಲಕ ಗಮನ ಸೆಳೆಯಲಾಗಿದೆ. ಬಿಗ್‌ ಬಾಸ್ ಶಶಿ ಹೀರೋ ಆಗಿ ನಟಿಸಿರುವ ಈ ಸಿನಿಮಾದಲ್ಲಿ ಚಿರಶ್ರೀ ಅವರು ನಾಯಕಿ ಆಗಿದ್ದಾರೆ. ‘ನಿರ್ಮಾಪಕ ಸುಬ್ಬು ಅವರು ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ವಿನ್ಸೆಂಟ್ ಇನ್ಬರಾಜ್ ಅವರು ಈ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅರುಳ್ ಸೆಲ್ವನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಡೆನ್ನಿಸ್ ವಲ್ಲಭನ್ ಅವರ ಸಂಗೀತ ನಿರ್ದೇಶನ ಈ ಸಿನಿಮಾಗಿದೆ.

Leave a Reply

Your email address will not be published. Required fields are marked *

error: Content is protected !!