ಉದಯವಾಹಿನಿ, ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ನಂತರ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಮತ್ತೆ ಟೀಮ್ ಇಂಡಿಯಾ ಸೇರಿಕೊಳ್ಲಲು ಸಜ್ಜಾಗಿದ್ದಾರೆ. ಚಾಂಪಿಯನ್ಸ್ ಟ್ರೋಫಿ ನಂತರ ಕೊಹ್ಲಿ ಟೀಮ್ ಇಂಡಿಯಾದಿಂದ ವಿರಾಮ ತೆಗೆದುಕೊಂಡಿದ್ದರು. ಐಪಿಎಲ್ 2025 ಮುಗಿದ ಕೂಡಲೇ ಅವರು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಇಂಗ್ಲೆಂಡ್‌ಗೆ ತೆರಳಿ ಅಲ್ಲಿ ದೀರ್ಘಕಾಲ ಇದ್ದರು. ಕೊಹ್ಲಿ ಈಗ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಟೀಮ್ ಇಂಡಿಯಾ ಸೇರಲಿದ್ದಾರೆ. ವಿರಾಟ್ ಕೊಹ್ಲಿ ಭಾರತಕ್ಕೆ ಕಾಲಿಟ್ಟಾಗ ಅವರನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದರು.
ವಿಮಾನ ನಿಲ್ದಾಣದಲ್ಲಿ, ಕೊಹ್ಲಿ ಕಪ್ಪು ಶರ್ಟ್ ಮತ್ತು ಬಿಳಿ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರು. ವಿಮಾನ ನಿಲ್ದಾಣದಲ್ಲಿ ಅವರನ್ನು ನೋಡಿದ ಅಭಿಮಾನಿಗಳು ಖುಷಿಯಿಂದ ಜೈಕಾರ ಹಾಕಿದ್ದಾರೆ. ವಿರಾಟ್ ಕೊಹ್ಲಿ ಅವರ ವಿಮಾನ ನಿಲ್ದಾಣದ ಲುಕ್‌ನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ಅಂದಹಾಗೆ ಕೊಹ್ಲಿ ಟೆಸ್ಟ್ ಮತ್ತು ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ, ಹೀಗಾಗಿ ಅವರು ಏಕದಿನ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯುತ್ತಿದ್ದಾರೆ.
