ಉದಯವಾಹಿನಿ,ಹೊಸದಿಲ್ಲಿ: ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಭಾರತ ತಂಡದಲ್ಲಿ ತಿಲಕ್ ವರ್ಮಾ ಬದಲು ಕೋಲ್ಕತಾ ನೈಟ್ ರೈಡರ್ಸ್ ಸ್ಟಾರ್ ಆಟಗಾರ ರಿಂಕು ಸಿಂಗ್‌ಗೆ ಅವಕಾಶ ನೀಡಬೇಕಾಗಿತ್ತು ಎಂದು ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿರುವ ವಿಡಿಯೋದಲ್ಲಿ ಮಾತನಾಡಿದ ಆಕಾಶ್ ಚೋಪ್ರಾ, “ಭಾರತ ಟಿ20 ತಂಡದ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಇದ್ದಾರೆ. ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಅವರನ್ನು ಆಡಿಸಲಾಗುತ್ತದೆ ಎಂದು ನಾನು ಭಾವಿಸುವುದಿಲ್ಲ. ನಾಯಕ ಹಾರ್ದಿಕ್ ಪಾಂಡ್ಯ ಬಳಿಕ ಯಾವ ಬ್ಯಾಟ್ಸ್‌ಮನ್ ಅನ್ನು ಆಡಿಸಬೇಕೆಂದು ಟೀಮ್ ಮ್ಯಾನೇಜ್‌ಮೆಂಟ್ ಯೋಚಿಸುತ್ತಿದ್ದರೆ, ರಿಂಕು ಸಿಂಗ್ ಈ ಸ್ಥಾನಕ್ಕೆ ಸೂಕ್ತರಾಗುತ್ತಾರೆ. ತಿಲಕ್ ವರ್ಮಾ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸಿಲ್ಲವಾದರೆ, ಅವರು ಕೆಳ ಮಧ್ಯಮ ಕ್ರಮಾಂಕಕ್ಕೆ ಸೂಕ್ತರಾಗುವುದಿಲ್ಲ. ಹಾಗಾಗಿ ಅವರ ಬದಲು ರಿಂಕು ಸಿಂಗ್‌ಗೆ ಅವಕಾಶ ನೀಡಬೇಕಾಗಿತ್ತು,” ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.
