ಉದಯವಾಹಿನಿ, ಪಣಜಿ: ಹೃದಯಸ್ತಂಭನದಿಂದ ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಆದರೆ ತಡರಾತ್ರಿ 1 ಗಂಟೆಯ ಸುಮಾರಿಗೆ ರವಿ ನಾಯ್ಕ್ ನಿಧನರಾಗಿದ್ದಾರೆ. ಇಂದು ಸಂಜೆ 3 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
79 ವರ್ಷದ ರವಿ ನಾಯ್ಕ್ 2 ಬಾರಿ ಸಿಎಂ ಆಗಿ ಆಯ್ಕೆಯಾಗಿದ್ದರು. ಅಲ್ಲದೇ 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇನ್ನು ರವಿ ನಾಯ್ಕ್ ನಿಧನಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ. ರವಿ ನಾಯ್ಕ್ ಅವರ ನಾಯಕತ್ವ, ವಿನಯತೆ ಹಾಗೂ ಸಾರ್ವಜನಿಕ ಕಲ್ಯಾಣಕ್ಕೆ ನೀಡಿದ ಕೊಡುಗೆ ಗಮನಾರ್ಹ ಎಂದು ಪ್ರಮೋದ್ ಸಾವಂತ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇ

Leave a Reply

Your email address will not be published. Required fields are marked *

error: Content is protected !!