ಉದಯವಾಹಿನಿ, ಬೆಂಗಳೂರು: ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಸಿದ್ದರಾಮಯ್ಯ ಸರ್ಕಾರ ಮೂಗುದಾರ ಹಾಕಿದೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆ ನಿಷೇಧಿಸಲು ಕ್ಯಾಬಿನೆಟ್ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. 2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸರ್ಕಾರ ತಮಿಳುನಾಡು ಸರ್ಕಾರ ಕೈಗೊಂಡಿರುವ ನಿರ್ಧಾರದಂತೆ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾನುಮತಿ ಕಡ್ಡಾಯ ಮಾಡಿ ಹೊಸ ನಿಯಮ ತರಲು ಮುಂದಾಗಿದೆ. ತನ್ನ ತೀರ್ಮಾನದಲ್ಲಿ ಎಲ್ಲಿಯೂ ಆರ್‌ಎಸ್‌ಎಸ್ ಪದ ಬಳಕೆ ಮಾಡದ ಸರ್ಕಾರ ಖಾಸಗಿ ಸಂಸ್ಥೆಗಳು ಎಂದು ಉಲ್ಲೇಖಿಸಿ ಜಾಣ್ಮೆ ನಡೆ ಇರಿಸಿದೆ.ಈ ನಿಯಮ ಜಾರಿಯಾದರೆ ಆರ್‌ಎಸ್‌ಎಸ್ ಮಾತ್ರವಲ್ಲ ಖಾಸಗಿ ಸಂಘ ಸಂಸ್ಥೆಗಳು / ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ. ಯಾರೇ ಯಾವುದೇ ಕಾರ್ಯಕ್ರಮ ಮಾಡುವುದಾದರೂ ಅನುಮತಿ ಪಡೆಯಬೇಕಾಗುತ್ತದೆ.
ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗೆ ನಿಯಂತ್ರಣ ಮಾಡುವಂತೆ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು.
