ಉದಯವಾಹಿನಿ, ಬೆಂಗಳೂರು: ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರದಿಂದ ಕೊಡಲಾಗುವ ಅಕ್ಕಿಯನ್ನು ತೆಗೆದುಕೊಂಡರೆ ಮಾತ್ರ ಅನ್ನಭಾಗ್ಯ ಯೋಜನೆಯ ಹಣವನ್ನು ನೀಡುವುದಾಗಿ ರಾಜ್ಯ ಸರ್ಕಾರದ ಸ್ಪಷ್ಟಪಡಿಸಿದೆ. ಬಡವರಿಗಾಗಿ ರೂಪಿಸಿರುವ ಯೋಜನೆಗಳಲ್ಲಿ ಆಹಾರ ಭದ್ರತಾ ಕಾಯ್ದೆಯ ಅಡಿ ನೀಡಲಾಗುವ ಆಹಾರ ಧಾನ್ಯಗಳೂ ಸೇರಿವೆ. ಹಾಗಾಗಿ, ಆ ಅಕ್ಕಿಯನ್ನು ಪಡೆಯಲೇಬೇಕು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಮತ್ತೊಂದೆಡೆ, ಭಾಗ್ಯಲಕ್ಷ್ಮಿ ಯೋಜನೆಯು ಜಾರಿಯಾದ ನಂತರ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಹಣ ಬಂದಾಗ ವಾಯ್ಸ್ ಮೆಸೇಜ್ ಕಳಿಸುವಂಥ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಮಹಿಳಾ ಮತ್ತು ಕುಟುಂಬ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
