ಉದಯವಾಹಿನಿ, ಮಾಸ್ಕೋ: ಭಾರತ ಮತ್ತು ರಷ್ಯಾ ಸಂಬಂಧವು ನಂಬಿಕೆಯ ಮೇಲೆ ಕಟ್ಟಿರುವ ಸೇತುವೆ, ಘನವಾದ ಅಡಿಪಾಯ ಹೊಂದಿದೆ. ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ರಷ್ಯಾದ ತೈಲ ಪೂರೈಕೆಯು ಭಾರತದ ಆರ್ಥಿಕತೆಗೆ ಮುಖ್ಯವಾಗಿದೆ ಎಂದು ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ ಹೇಳಿದ್ದಾರೆ.
ಮಾಸ್ಕೋ: ಭಾರತ ಮತ್ತು ರಷ್ಯಾ ಸಂಬಂಧವು ನಂಬಿಕೆಯ ಮೇಲೆ ಕಟ್ಟಿರುವ ಸೇತುವೆ, ಘನವಾದ ಅಡಿಪಾಯ ಹೊಂದಿದೆ. ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ರಷ್ಯಾದ ತೈಲ ಪೂರೈಕೆಯು ಭಾರತದ ಆರ್ಥಿಕತೆಗೆ ಮುಖ್ಯವಾಗಿದೆ ಎಂದು ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ ಹೇಳಿದ್ದಾರೆ.
ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ ಅಂತ ಮೋದಿ ನನಗೆ ಭರವಸೆ ನೀಡಿದ್ದಾರೆ ಎಂಬ ಟ್ರಂಪ್ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ. ನಮ್ಮ ಸರ್ಕಾರವು ಭಾರತದ ಹಿತಾಸಕ್ತಿಗೆ ಅನುಗುಣವಾಗಿದೆ. ಏಕೆಂದ್ರೆ ರಷ್ಯಾ ತೈಲ ಪೂರೈಕೆಯು ಭಾರತದ ಆರ್ಥಿಕತೆಗೆ ಪ್ರಯೋಜನಕಾರಿಯಾಗಿದೆ. ನಮ್ಮ ನಡುವಿನ ಕಾರ್ಯತಂತ್ರ ಹಾಗೂ ಪಾಲುದಾರಿಕೆಯು ಜಾಗತಿಕ ವ್ಯವಹಾರ ಸ್ಥಿರಗೊಳಿಸುವ ಶಕ್ತಿಯಾಗಿ ಪರಿಣಮಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತ ಹೇಳಿದ್ದೇನು…?: ಇನ್ನೂ ಟ್ರಂಪ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತ, ದೇಶದ ಗ್ರಾಹಕರ ಹಿತಾಸಕ್ತಿ ಕಾಪಾಡುವುದು ಭಾರತ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದೆ.
ಟ್ರಂಪ್ ಹೇಳಿದ್ದೇನು?
ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿರುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನನಗೆ ಭರವಸೆ ನೀಡಿದ್ದಾರೆ. ಇದು ನಿಜಕ್ಕೂ ಒಂದು ಪ್ರಮುಖ ಹೆಜ್ಜೆ. ರಷ್ಯಾ-ಉಕ್ರೇನ್ ಯುದ್ಧ ತಡೆಯುವ ನಮ್ಮ ಪ್ರಯತ್ನಗಳ ಭಾಗವೂ ಆಗಿದೆ. ಚೀನಾಗೂ ಸಹ ಅದೇ ರೀತಿ ಮಾಡುವಂತೆ ನಾವು ಹೇಳಬೇಕಾಗಿದೆ ಎಂದು ಹೇಳಿದ್ದರು.
ಅಮೆರಿಕದ ಆರೋಪ ಏನಿದೆ?: ಭಾರತವು ರಷ್ಯಾದ ತೈಲ ಖರೀದಿ ಮಾಡುವ ಮೂಲಕ ಉಕ್ರೇನ್ ವಿರುದ್ಧದ ಯುದ್ಧಕ್ಕೆ ಹಣಕಾಸಿನ ನೆರವು ನೀಡುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಅವರ ಬಲವಾದ ನಂಬಿಕೆ. ಅಮೆರಿಕದ ಕೆಲ ಅಧಿಕಾರಿಗಳೂ ಟ್ರಂಪ್ ಹೇಳಿಕೆಯನ್ನ ಉಲ್ಲೇಖಿಸಿ ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಭಾರತಕ್ಕೆ ಮನವಿ ಮಾಡಿಕೊಂಡಿದ್ದರು. ಆದ್ರೆ ರಷ್ಯಾದ ಸಂಬಂಧ ಬಿಟ್ಟುಕೊಡದ ಭಾರತ ತೈಲ ಖರೀದಿ ಮುಂದುವರಿಸಿದೆ.
