ಉದಯವಾಹಿನಿ, ಬೆಂಗಳೂರು: ಪ್ರೇಯಸಿಯನ್ನ‌ ಭೀಕರವಾಗಿ ಹತ್ಯೆ ಮಾಡಿ ತಲೆಮರಿಸಿಕೊಂಡಿರೋ ಹಂತಕನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಯುವತಿ ಪ್ರೀತಿ‌ ನಿರಾಕಿಸಿದ್ದಕ್ಕೆ ಆರೋಪಿ ವಿಘ್ನೇಶ್ ಶ್ರೀರಾಂಪುರ ರೈಲ್ವೇ ನಿಲ್ದಾಣದ ಬಳಿ ಹತ್ಯೆ ಮಾಡಿ ತಾನು ಬಳಸುತ್ತಿದ್ದ ಮೊಬೈಲ್ ಎಸೆದು ಎಸ್ಕೇಪ್ ಆಗಿದ್ದಾನೆ. ನೆನ್ನೆ ಮಧ್ಯಾಹ್ನ ನಡೆದ ಕೊಲೆ ಪ್ರಕರಣದ ಬಗ್ಗೆ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 144/2025, ಕಲಂ 103 ಕ್ಲಾಸ್-1 ಬಿಎನ್‌ಎಸ್‌ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆ ಕೈಗೊಂಡಿರುವ ಪೊಲೀಸರು ಆರೋಪಿಗಾಗಿ ತೀವ್ರ ಶೋಧ ಆರಂಭಿಸಿದ್ದಾರೆ. ಇತ್ತ ಮೃತಳ ಶವವು ವಿಕ್ಟೋರಿಯಾ ಆಸ್ಪತ್ರೆಯಲ್ಲಿದೆ. ಇಂದು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸಂಬಂಧಿಕರಿಗೆ ಹಸ್ತಾಂತರಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇನ್ನೂ ತಲೆ ಮರೆಸಿಕೊಂಡಿರುವ ಆರೋಪಿ ಪತ್ತೆಗೆ ಪ್ರತ್ಯೇಕ ಎರಡು ತಂಡಗಳನ್ನ ರಚನೆ ಮಾಡಿ ಹುಡುಕಾಟ ನಡೆಸಲಾಗುತ್ತಿದೆ. ಆರೋಪಿ ತಮಿಳುನಾಡಿಗೆ ಹೋಗಿ ತಲೆಮರಿಸಿಕೊಂಡಿರೋ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆ ತಮಿಳುನಾಡಿಗೂ ಒಂದು ತಂಡ ತೆರಳಿದ್ದು, ಶೋಧ ನಡೆಸುತ್ತಿದೆ.

Leave a Reply

Your email address will not be published. Required fields are marked *

error: Content is protected !!