ಉದಯವಾಹಿನಿ, ಬೆಂಗಳೂರು: ಇನ್ಮುಂದೆ ಸರ್ಕಾರದ ಸಭೆ, ಸಮಾರಂಭಗಳಲ್ಲಿ ಜನಪ್ರತಿನಿಧಿಗಳ ಆಹ್ವಾನಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟ ಮಾಡಿದೆ. 2019ರ ಸುತ್ತೋಲೆಯಲ್ಲಿನ ಮಾರ್ಗಸೂಚಿಗಳನ್ನ ಮಾರ್ಪಾಡು ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ರಾಜ್ಯ ಮಟ್ಟದ ಕಾರ್ಯಕ್ರಮ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಕಾರ್ಯಕ್ರಮ, ರಾಜ್ಯದಲ್ಲಿ ನಡೆಯೋ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ಅನ್ವಯವಾಗಲಿದೆ. ಅದರ ಅನ್ವಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಡ್ಡಾಯವಾಗಿ ಶಿಷ್ಟಾಚಾರ ಪಾಲನೆ ಮಾಡಬೇಕಾಗಿ ಸೂಚಿಸಿದೆ. ಮಾರ್ಗಸೂಚಿಯಲ್ಲಿ ಏನಿದೆ ಅನ್ನೋದನ್ನ ಮುಂದೆ ನೋಡೋಣ…
ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಮಾರ್ಗಸೂಚಿ
> ಸಿಎಂ, ಡಿಸಿಎಂ, ಸಂಬಂಧ ಪಟ್ಟ ಇಲಾಖೆ ಸಚಿವರು, ಇಲಾಖಾ ಸಚಿವರು ಸೂಚಿಸುವ ಯಾವುದೇ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಬಹುದು.
> ಸಿಎಂ, ಡಿಸಿಎಂ ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಸಂಬಂಧ ಪಟ್ಟ ಇಲಾಖೆ ಸಚಿವರು ಅಧ್ಯಕ್ಷತೆ ವಹಿಸುತ್ತಾರೆ.
> ಇಲಾಖಾ ಸಚಿವರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಸ್ಥಳೀಯ ಶಾಸಕರು ಅಧ್ಯಕ್ಷತೆ ವಹಿಸುವುದು.
> ಇತರೆ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಯಾರು ಅಧ್ಯಕ್ಷತೆವಹಿಸಬೇಕು ಅಂತ ಇಲಾಖೆ ಸಚಿವರು ನಿರ್ಧಾರ ಮಾಡುತ್ತಾರೆ.
> ಕಾರ್ಯಕ್ರಮದಲ್ಲಿ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗು ಗಣ್ಯರ ಹೆಸರು 9 ಸಂಖ್ಯೆ ಮೀರದಂತೆ ಹಾಗೂ ಅನಿವಾರ್ಯ ಸಮಯದಲ್ಲಿ 13 ಸಂಖ್ಯೆ ಮೀರದಂತೆ ಆಯ್ಕೆ ಮಾಡುವುದು. ಸ್ಥಳೀಯ ಶಾಸಕರ ಹೆಸರು ಕಡ್ಡಾಯ ಸೇರಿಸುವುದು.
> ವಿಧಾನಸೌಧ, ವಿಕಾಸಸೌಧದಲ್ಲಿ ನಡೆಯೊ ಕಾರ್ಯಕ್ರಮದಲ್ಲಿ ಇಲಾಖೆ ಸಚಿವರು ಸಭಾಪತಿ, ಸಭಾಧ್ಯಕ್ಷರ ಸಹಮತಿ ಪಡೆದು ಯಾರು ವೇದಿಕೆ ಆಸೀನರಾಗೋ ಗಣ್ಯರ ಅಯ್ಕೆ ಮಾಡುವುದು.
ಇಲಾಖೆಗಳು ಆಯೋಜಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಗಳು
> ಸಿಎಂ, ಡಿಸಿಎಂ, ಸಂಬಂಧ ಪಟ್ಟ ಇಲಾಖೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಇಲಾಖಾ ಸಚಿವರು ಸೂಚಿಸುವ ಯಾವುದೇ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಬಹುದು.
> ಸಿಎಂ, ಡಿಸಿಎಂ ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಸಂಬಂಧಪಟ್ಟ ಇಲಾಖೆ ಸಚಿವರು ಅಧ್ಯಕ್ಷತೆವಹಿಸುತ್ತಾರೆ.
> ಇಲಾಖಾ ಸಚಿವರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷತೆವಹಿಸುವುದು.
> ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆ ಸ್ಥಳೀಯ ಶಾಸಕರು ಅಧ್ಯಕ್ಷತೆವಹಿಸುವುದು.
> ಇತರೆ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಯಾರು ಅಧ್ಯಕ್ಷತೆವಹಿಸಬೇಕು ಅಂತ ಇಲಾಖೆ ಸಚಿವರು ನಿರ್ಧಾರ ಮಾಡುತ್ತಾರೆ.
> ಕಾರ್ಯಕ್ರಮದಲ್ಲಿ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗುವ ಗಣ್ಯರ ಹೆಸರು 9 ಸಂಖ್ಯೆ ಮೀರದಂತೆ ಹಾಗೂ ಅನಿವಾರ್ಯ ಸಮಯದಲ್ಲಿ 13 ಸಂಖ್ಯೆ ಮೀರದಂತೆ ಆಯ್ಕೆ ಮಾಡುವುದು. ಸ್ಥಳೀಯ ಶಾಸಕರ ಹೆಸರು ಕಡ್ಡಾಯ ಸೇರಿಸುವುದು.
