ಉದಯವಾಹಿನಿ, ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಯತ್ನದ ಫಲವಾಗಿ ಕೇಂದ್ರ ಸರ್ಕಾರ ದೀಪಾವಳಿ ವೇಳೆ ರಾಜ್ಯಕ್ಕೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ರಾಜಧಾನಿ ಬೆಂಗಳೂರು ಮತ್ತು ವಾಣಿಜ್ಯ‌ ನಗರಿ ಹುಬ್ಬಳ್ಳಿ ಮಧ್ಯೆ ನಿತ್ಯ ‘ಸೂಪರ್ ಫಾಸ್ಟ್ ವಿಶೇಷ ರೈಲು’ ಸಂಚಾರದ ಕೊಡುಗೆ ನೀಡಿದೆ.ಹುಬ್ಬಳ್ಳಿ-ಬೆಂಗಳೂರು ಮಾರ್ಗದಲ್ಲಿ ಡಿಸೆಂಬರ್ 8ರಿಂದ ಪ್ರತಿನಿತ್ಯವೂ ಈ ವಿಶೇಷ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅದರಂತೆ ರೈಲು ಸಂಖ್ಯೆ: 20687 ಮತ್ತು 20688 SBC ಈ ಮಾರ್ಗದಲ್ಲಿ ನಿಯತಕಾಲಿಕವಾಗಿ ಸಂಚಾರ ಆರಂಭಿಸಲಿವೆ.
ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಕೊಂಡಿಯಂತಿರುವ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಹೆಚ್ಚಿನ ಜನಸಂಪರ್ಕ ಇರುವುದರಿಂದ ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಕೆಲ ದಿನಗಳ ಹಿಂದಷ್ಟೇ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದರು. ಸಚಿವ ಜೋಶಿ ಅವರ ಒತ್ತಾಸೆಗೆ ಸ್ಪಂದಿಸಿದ ರೈಲ್ವೆ ಸಚಿವರಿಬ್ಬರೂ ಇದೀಗ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಮತ್ತೊಂದು ಸೂಪರ್‌ ಫಾಸ್ಟ್‌ ವಿಶೇಷ ರೈಲು ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!