ಉದಯವಾಹಿನಿ, ಬೆಂಗಳೂರು: ಸರ್ಕಾರ ನಡೆಸುತ್ತಿರೋ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣಮೂರ್ತಿ ಸುಧಾಮೂರ್ತಿ ಕುಟುಂಬದ ಮಾಹಿತಿ ಬಹಿರಂಗ ಮಾಡಿದ ಸರ್ಕಾರದ ನಡೆಗೆ ಜೆಡಿಎಸ್ ಕಿಡಿಕಾರಿದೆ. ಈ ಸಂಬಂಧ Xನಲ್ಲಿ ಕಿಡಿಕಾರಿರುವ ಜೆಡಿಎಸ್ ಸಿದ್ದರಾಮಯ್ಯ, ಡಿಕೆಶಿವಕುಮಾರ್, ಹರಿಪ್ರಸಾದ್ ವಿರುದ್ದ ಕಿಡಿಕಾರಿದೆ.
X ಪೋಸ್ಟ್‌ನಲ್ಲಿ ಏನಿದೆ?
ಕಾಂಗ್ರೆಸ್ ಸರ್ಕಾರ (Congress Government) ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆ ಮಾಹಿತಿಗಳು ಸೋರಿಕೆಯಾಗಿರುವುದು ಆತಂಕಕಾರಿ ಬೆಳವಣಿಗೆ. ಸಮೀಕ್ಷೆಯಲ್ಲಿ ಜನರಿಂದ ಸಂಗ್ರಹಿಸಿದ ಮಾಹಿತಿಗಳು ಎಷ್ಟು ಸುರಕ್ಷಿತ? ಇನ್ಫೋಸಿಸ್ ಸಂಸ್ಥೆಯ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ಅವರು ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ನೀಡಿದ್ದ ಸ್ವಯಂ ದೃಢೀಕರಣ ಪತ್ರವನ್ನು, ಸಾರ್ವಜನಿಕಗೊಳಿಸಿ ಮಾಹಿತಿ ಸೋರಿಕೆ ಮಾಡಲಾಗಿದೆ.
ಇದು ನ್ಯಾಯಾಂಗ ನಿಂದನೆ ಆಗುವುದಿಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರೇ. ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಸ್ವಯಂ ಇಚ್ಛೆಗೆ ಬಿಟ್ಟಿದ್ದು, ಇದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಗೌಪ್ಯವಾಗಿಡಬೇಕು ಮತ್ತು ಅದರ ದುರ್ಬಳಕೆಯನ್ನು ತಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಜಾತಿಗಣತಿಯಲ್ಲಿ ಭಾಗವಹಿಸದವರು “ದೇಶದ್ರೋಹಿಗಳು” ಎಂಬ ಹಣೆಪಟ್ಟಿಯನ್ನು ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಕಟ್ಟಿದ್ದಾರೆ.
