ಉದಯವಾಹಿನಿ, ನವದೆಹಲಿ: ದೆಹಲಿಯಲ್ಲಿ ( ಸಂಸತ್ ಸದಸ್ಯರಿಗೆ ಹಂಚಿಕೆಯಾದ ಫ್ಲ್ಯಾಟ್‌ಗಳಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.ಬಿಡಿ ಮಾರ್ಗದಲ್ಲಿರುವ ಬ್ರಹ್ಮಪುತ್ರ ಅಪಾರ್ಟ್‌ಮೆಂಟ್‌ಗಳಿಂದ ಹೊಗೆ ಮೇಲೇರುತ್ತಿರುವ ದೃಶ್ಯ ಕಂಡುಬಂದಿದೆ. ಅದನ್ನು ಈಗ ನಂದಿಸಲಾಗಿದೆ. ರಾಜಧಾನಿಯ ಬಿಶಂಭರ್ ದಾಸ್ ಮಾರ್ಗದಲ್ಲಿರುವ ಬ್ರಹ್ಮಪುತ್ರ ಅಪಾರ್ಟ್‌ಮೆಂಟ್‌ಗಳು ರಾಜ್ಯಸಭಾ ಸಂಸದರ ವಸತಿ ಸಂಕೀರ್ಣವಾಗಿದೆ.
ಮಧ್ಯಾಹ್ನ 1:20 ಕ್ಕೆ ಅಗ್ನಿಶಾಮಕ ಇಲಾಖೆಗೆ ಬೆಂಕಿಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಅಪಾರ್ಟ್ಮೆಂಟ್‌ನಲ್ಲಿರುವ ಅಗ್ನಿಶಾಮಕ ಘಟಕ ಕಾರ್ಯನಿರ್ವಹಿಸುತ್ತಿಲ್ಲ. ಟ್ಯಾಂಕ್ ಮತ್ತು ಪೈಪ್‌ಲೈನ್‌ಗಳಲ್ಲಿ ನೀರಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಬೆಂಕಿಯಿಂದ ಅಪಾರ್ಟ್‌ಮೆಂಟ್‌ ಕೆಳಗಿನ ಎರಡು ಮಹಡಿಗಳಿಗೆ ಭಾರಿ ಹಾನಿಯಾಗಿದೆ.

Leave a Reply

Your email address will not be published. Required fields are marked *

error: Content is protected !!