ಉದಯವಾಹಿನಿ, ನವದೆಹಲಿ: ಭಾರತ ಟಿ20ಐ ತಂಡದ ನಾಯಕ ಸೂರ್ಯಕುಮಾರ್ ಯಾದವ್ Yadav) ಭವಿಷ್ಯದ ನಾಯಕತ್ವ ಬದಲಾವಣೆಯ ಕುರಿತು ಪ್ರಮುಖ ಹೇಳಿಕೆಯನ್ನು ನೀಡಿದ್ದಾರೆ. ಯುವ ಪ್ರತಿಭೆ ಮತ್ತು ಎರಡೂ ಸ್ವರೂಪಗಳಲ್ಲಿ ಟೀಮ್ ಇಂಡಿಯಾದ ಪ್ರಸ್ತುತ ನಾಯಕ ಶುಭಮನ್ ಗಿಲ್ ಅವರಿಂದ ತಮ್ಮ ಟಿ20ಐ ನಾಯಕತ್ವವನ್ನು ಕಳೆದುಕೊಳ್ಳುವ ಭಯವಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ. ಆದಾಗ್ಯೂ, ಈ ಭಯವು ತಮ್ಮನ್ನು ಉತ್ತಮವಾಗಿ ಪ್ರದರ್ಶನ ನೀಡಲು ಪ್ರೇರೇಪಿಸುತ್ತದೆ ಎಂದು ಸೂರ್ಯಕುಮಾರ್ ಸ್ಪಷ್ಟಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.
26ನೇ ವಯಸ್ಸಿನ ಶುಭಮನ್ ಗಿಲ್, ಟೀಮ್ ಇಂಡಿಯಾದಲ್ಲಿ ಪ್ರಾಬಲ್ಯ ಸಾಧಿಸುವುದನ್ನು ಮುಂದುವರಿಸಿದ್ದಾರೆ ಮತ್ತು ಇದೀಗ ಮೂರು ಸ್ವರೂಪಗಳಲ್ಲಿ ಭಾರತ ತಂಡದ ಭವಿಷ್ಯದ ನಾಯಕ ಎಂದು ಪರಿಗಣಿಸಲ್ಪಡುತ್ತಿದ್ದಾರೆ. ಗಿಲ್ ಈಗಾಗಲೇ ಟೆಸ್ಟ್ ಮತ್ತು ಏಕದಿನ ತಂಡಗಳನ್ನು ಮುನ್ನಡೆಸುತ್ತಿದ್ದಾರೆ ಮತ್ತು ಟಿ20ಐ ಸ್ವರೂಪದಲ್ಲಿ ಸೂರ್ಯಕುಮಾರ್ ಯಾದವ್‌ಗೆ ಉಪನಾಯಕರಾಗಿದ್ದಾರೆ. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಜಯಗಳಿಸಿದ ನಂತರ ಅವರಿಗೆ (ಸೂರ್ಯಕುಮಾರ್) ಈ ಜವಾಬ್ದಾರಿಯನ್ನು ನೀಡಲಾಗಿತ್ತು.
