ಉದಯವಾಹಿನಿ, ಬೆಂಗಳೂರು:  ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 2023-24ನೇ ಸಾಲಿನ ಬಜೆಟ್‌ನಲ್ಲಿ ನವೋದ್ಯಮಗಳು, ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ವಲಯಗಳಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಹಲವು ಹೊಸ ಯೋಜನೆಗಳು, ಕೇಂದ್ರಗಳನ್ನು ಘೋಷಿಸಿದ್ದಾರೆ.

ಸಿದ್ದರಾಮಯ್ಯ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ವಲಯಕ್ಕೆ ಘೋಷಿಸಿರುವ ಯೋಜನೆಗಳ ವಿವರ ಈ ಮುಂದಿನಂತೆ ಇದೆ:-

1. ನವೋದ್ಯಮಿಗಳಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ವಿಶ್ವದರ್ಜೆಯ ಪರಿಪೋಷಣ ಕೇಂದ್ರ ʻINNOVERSEʼ ಅನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

2. ಸ್ಟಾರ್ಟಪ್‌ ನೀತಿಯಡಿಯಲ್ಲಿ ಅನುದಾನ ನೀಡಿರುವ ಸ್ಟಾರ್ಟ್‌ಅಪ್‌ಗಳ ಪರಿಹಾರಗಳ ಅಳವಡಿಕೆಯನ್ನು ವೇಗಗೊಳಿಸಲು ʻPropelʼ ಎಂಬ ಯೋಜನೆಯನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಆಯೋಜಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ.

3. ಸ್ಟಾರ್ಟ್ಅಪ್‍ಗಳಿಗೆ GIA-MAP ಕಾರ್ಯಕ್ರಮವನ್ನು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಆಯೋಜಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ.

4. New Age Incubation Network ಕೇಂದ್ರಗಳನ್ನು ಬೆಂಬಲಿಸಲು ತಂತ್ರಜ್ಞಾನ ವರ್ಗಾವಣೆ ಸಂಸ್ಥೆಯನ್ನು ನಾಲ್ಕು ಕೋಟಿ ರೂ. ಗಳ ಯೋಜನಾ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎರಡು ಕೋಟಿ ರೂ. ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

5. ಹೆಲ್ತ್‌-ಟೆಕ್‌ ಮತ್ತು ಮೆಡ್-ಟೆಕ್‌ನಲ್ಲಿ ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಕೇಂದ್ರವನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

6. ಜೈವಿಕ-ಬ್ಯಾಂಕ್ (Bio Bank) ಅನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎರಡು ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

7. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Centre of Excellence in Wireless & Wired Technologies in Karnataka ಅನ್ನು 25 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಐದು ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

8. ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಇನ್‌ ಡಿಸೈನ್ ಕೇಂದ್ರವನ್ನು 20 ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎಂಟು ಕೋಟಿ ರೂ. ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

9. ಕರ್ನಾಟಕ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ ನೀತಿಯ ಅನುಷ್ಠಾನಕ್ಕೆ ದೃಢವಾದ ಮತ್ತು ಪಾರದರ್ಶಕ ಆಡಳಿತದ ಚೌಕಟ್ಟನ್ನು ರಚಿಸುವುದು ಹಾಗೂ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವುದು ಅಗತ್ಯವಾಗಿದೆ. ಈ ಉದ್ದೇಶಕ್ಕಾಗಿ ಕರ್ನಾಟಕ ರಾಜ್ಯ ಸಂಶೋಧನಾ ಪ್ರತಿಷ್ಠಾನವನ್ನು (ಕೆಎಸ್‌ಆರ್‌ಎಫ್) ರಚಿಸಲಾಗುವುದು.

10. ಉದ್ಯಮಗಳು, ವಿಶ್ವವಿದ್ಯಾನಿಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಸರ್ಕಾರಗಳ ಸಮನ್ವಯತೆಯನ್ನು ಸಾಧಿಸಲು ಇ-ಪ್ಲಾಟ್‌ಫಾರ್ಮ್‌ e-KRDIP ರಚನೆ

11. ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ರೈತರು, ಕುಶಲಕರ್ಮಿಗಳು, ಕಾರ್ಮಿಕರು, ಯಂತ್ರಕಾರರು ಮತ್ತು ಸಾಮಾನ್ಯ ಜನರು ರಚಿಸಿದ ತಳಹಂತದ ನಾವೀನ್ಯತೆಗಳನ್ನು ಗುರುತಿಸಿ, ಅವುಗಳಿಗೆ ಮೌಲ್ಯವನ್ನು ದೊರಕಿಸುವ ಮೂಲಕ ವಾಣಿಜ್ಯೀಕರಣಕ್ಕೆ ಬೆಂಬಲ ನೀಡಲು ಐದು ಕೋಟಿ ರೂ.ಗಳ ಅನುದಾನ ಘೋಷಣೆ.

Leave a Reply

Your email address will not be published. Required fields are marked *

error: Content is protected !!