ಉದಯವಾಹಿನಿ, ಬೆಂಗಳೂರು:  ಕರ್ನಾಟಕ ಬಜೆಟ್ 2013 ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತ ಸಮುದಾಯಗಳಿಗೆ ಹಲವಾರು ಯೋಜನೆಗಳನ್ನು ಘೋಷಿಸಿದರು. ಶಿಕ್ಷಣ ಮತ್ತು ಉದ್ಯೋಗಗಳಿಗೆ ಸಂಬಂಧಿಸಿದಂತೆ ಸಮುದಾಯಗಳಿಗೆ ಆದ್ಯತೆ ನೀಡಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಸಮುದಾಯಗಳ ಬಡ ವಿದ್ಯಾರ್ಥಿಗಳಿಗೆ ಸಿಗುತ್ತಿದ್ದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರಕಾರ ನಿಲ್ಲಿಸಿರುವುದರಿಂದ ಅದನ್ನು ಕರ್ನಾಟಕ ಸರ್ಕಾರ ಮುಂದುವರಿಸಲಿದೆ ಮತ್ತು ಇದಕ್ಕಾಗಿ ರೂ. 60 ಕೋಟಿ ತೆಗೆದಿರಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ರಾಜ್ಯದಲ್ಲಿರುವ ಮೌಲಾನಾ ಆಜಾದ್ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿರುವುದರಿಂದ ಆ ಶಾಲೆಗಳ ಗುಣಮಟ್ಟ ಮತ್ತಷ್ಟು ಹೆಚ್ಚಿಸಲು ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಸಮುದಾಯದ ಯುವಕರಿಗಾಗಿ ರಾಮನಗರ, ಬೆಳಗಾವಿ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

 

Leave a Reply

Your email address will not be published. Required fields are marked *

error: Content is protected !!