ಉದಯವಾಹಿನಿ , ನವದೆಹಲಿ: ಎಬಿವಿಪಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಸಬರಮತಿ ಧಾಬಾದಿಂದ ವಸಂತ್ ಕುಂಜ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಜೆಎನ್‌ಯುಎಸ್‌ಯು ಅಧ್ಯಕ್ಷ ನಿತೀಶ್ ಕುಮಾರ್ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಮತ್ತು ಮೂವರು ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಲ್ಲದೇ ಒಟ್ಟು 27 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದಿರುವ ವಿದ್ಯಾರ್ಥಿಗಳನ್ನು ಕಪಶೇರಾ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದ್ದು, ಅಲ್ಲಿಯೇ ಅವರು ಪ್ರತಿಭಟನೆ ಮುಂದುವರಿಸಿದ್ದಾರೆ.
ಈ FIR ದಸರಾ ಹಬ್ಬ ಕುರಿತ ಸಾಮಾನ್ಯ ಸಭೆ (ಜೆನರಲ್ ಬಾಡಿ ಮೀಟಿಂಗ್) ವೇಳೆ ನಡೆದ ಗಲಾಟೆಗೆ ಸಂಬಂಧಿಸಿದ್ದಾಗಿದೆ. ಈ ಘಟನೆಯು ಬಲ ಮತ್ತು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳ ನಡುವಿನ ಘರ್ಷಣೆಗೆ ಕಾರಣವಾಯಿತು ಎನ್ನಲಾಗಿದೆ.
