ಉದಯವಾಹಿನಿ, ನವದೆಹಲಿ: ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಹಾನಿಯುಂಟಾಗಿರುವ ಹಿನ್ನೆಲೆ ಎಸ್‌ಡಿಆರ್‌ಎಫ್‌ನಿಂದ ರಾಜ್ಯಕ್ಕೆ 384 ಕೋಟಿ ರೂ. ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ನೈಋತ್ಯ ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿ ಅಡಿಯಲ್ಲಿ ಒಟ್ಟು 1,950 ಕೋಟಿ ಮುಂಗಡೆಯಾಗಿ ಬಿಡುಗಡೆ ಮಾಡಲು ಗೃಹಸಚಿವ ಅಮಿತ್ ಶಾ (Amit Shah) ಅನುಮತಿ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮಹಾರಾಷ್ಟ್ರಕ್ಕೆ 1,566.40 ಕೋಟಿ ರೂ. ಅನುಮೋದಿಸಲಾಗಿದೆ.
ಈ ವರ್ಷ, ಕೇಂದ್ರವು ಈಗಾಗಲೇ ಎಸ್‌ಡಿಆರ್‌ಎಫ್ ಅಡಿಯಲ್ಲಿ 27 ರಾಜ್ಯಗಳಿಗೆ 13,603.20 ಕೋಟಿ ರೂ. ಮತ್ತು ಎನ್‌ಡಿಆರ್‌ಎಫ್ ಅಡಿಯಲ್ಲಿ 15 ರಾಜ್ಯಗಳಿಗೆ 2,189.28 ಕೋಟಿ ರೂ. ಬಿಡುಗಡೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪ್ರವಾಹ, ಭೂಕುಸಿತ, ಮೇಘಸ್ಫೋಟದಿಂದ ತೊಂದರೆಗೊಳಗಾದ ಜನರಿಗೆ ಎಲ್ಲಾ ರೀತಿಯ ಸಹಾಯ ನೀಡಲು ಕೇಂದ್ರ ಬದ್ಧವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!