ಉದಯವಾಹಿನಿ, ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ದೇಶ ವಿದೇಶಗಳ ಅನೇಕ ನಾಯಕರುಗಳು ಭಾರತೀಯರಿಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮವಾದ ಎಕ್ಸ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೇಶದ ಜನತೆಗೆ ದೀಪಾವಳಿಯ ಶುಭಾಶಯ ಕೋರಿದರು. ಬೆಳಕಿನ ಹಬ್ಬವು ದೇಶವಾಸಿಗಳ ಜೀವನವನ್ನು ಸಾಮರಸ್ಯ ಮತ್ತು ಸಂತೋಷದಿಂದ ಬೆಳಗಿಸಲಿ. ನಮ್ಮ ಸುತ್ತಲೂ ಸಕಾರಾತ್ಮಕತೆಯ ಚೈತನ್ಯ ಮೇಲುಗೈ ಸಾಧಿಸಲಿ ಎಂದು ಹಾರೈಸಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ದೇಶದ ಜನತೆಗೆ ದೀಪಾವಳಿ ಶುಭಾಶಯಗಳನ್ನು ತಿಳಿಸಿದ್ದಾರೆ. ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಹಬ್ಬವು ಬಡವರು ಮತ್ತು ನಿರ್ಗತಿಕರಿಗೆ ಸಹಾಯ ಮಾಡಲು ಮತ್ತು ಬೆಂಬಲಿಸಲು ಎಲ್ಲರಿಗೂ ಅವಕಾಶ ನೀಡುತ್ತದೆ. ಅವರ ಜೀವನದಲ್ಲಿ ಸಂತೋಷವನ್ನು ತರುತ್ತದೆ. ದೀಪಾವಳಿಯನ್ನು ಸುರಕ್ಷಿತವಾಗಿ, ಜವಾಬ್ದಾರಿಯುತವಾಗಿ ಮತ್ತು ಪರಿಸರ ಸ್ನೇಹಿ ರೀತಿಯಲ್ಲಿ ಆಚರಿಸಿ ಎಂದು ಹೇಳಿದ್ದಾರೆ.
ಭಾರತದ ಅತ್ಯಂತ ಜನಪ್ರಿಯ ಹಬ್ಬಗಳಲ್ಲಿ ಒಂದಾದ ದೀಪಾವಳಿಯನ್ನು ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ಹಬ್ಬವು ಕತ್ತಲೆಯ ಮೇಲೆ ಬೆಳಕು, ಅಜ್ಞಾನದ ಮೇಲೆ ಜ್ಞಾನ ಮತ್ತು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸಂಕೇತಿಸುತ್ತದೆ. ದೇಶಾದ್ಯಂತ ಅಪಾರ ಉತ್ಸಾಹದಿಂದ ಆಚರಿಸಲಾಗುವ ದೀಪಾವಳಿಯ ಶುಭ ಸಂದರ್ಭವು ಪರಸ್ಪರ ವಾತ್ಸಲ್ಯ ಮತ್ತು ಸಹೋದರತ್ವದ ಸಂದೇಶವನ್ನು ನೀಡುತ್ತದೆ ಎಂದು ಅವರು ತಿಳಿಸಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ದೀಪಾವಳಿಯ ಈ ಶುಭ ಸಂದರ್ಭದಲ್ಲಿ ಎಲ್ಲರ ಸಮೃದ್ಧಿಗಾಗಿ ಶ್ರೀರಾಮನಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು, ಎಲ್ಲರಿಗೂ ಸಂತೋಷ ಮತ್ತು ಸಂತೋಷದಾಯಕ ದೀಪಾವಳಿಯನ್ನು ಹಾರೈಸುತ್ತೇನೆ. ಬೆಳಕಿನ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಶಾಂತಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ ಎಂದು ಆಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!