ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿರುವ ನದಿಗಳ ನೀರಿನ ಕಲುಷಿತ ವಾತಾವರಣ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯೊಂದನ್ನು ಸಿದ್ಧಪಡಿಸಿದೆ. ಈ ವರದಿಯಲ್ಲಿ ರಾಜ್ಯದ 12 ನದಿಗಳ ನೀರು ಕುಡಿಯಲು ಸುರಕ್ಷಿತವಲ್ಲ ಎಂಬ ಮಾಹಿತಿ ನೀಡಿದೆ.
ಸೆಪ್ಟೆಂಬರ್‌ನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯದ 12 ಪ್ರಮುಖ ನದಿಗಳ ನೀರಿನ್ನು 32 ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದು, 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ನೀಡಿದೆ. 12 ನದಿಗಳ ನೀರಲ್ಲಿ ಆಮ್ಲಜನಕದ ಕೊರತೆ ಇರೋದು ಪತ್ತೆಯಾಗಿದ್ದು, ಪರೀಕ್ಷೆಗೆ ಒಳಪಟ್ಟ ನದಿಗಳ ಪೈಕಿ ಒಂದೂ ನದಿಗೂ `ಎ’ ದರ್ಜೆ ಸಿಕಿಲ್ಲ. ಹೀಗಾಗಿ ಯಾವುದೇ ನದಿ ನೀರನ್ನು ನೇರವಾಗಿ ಕುಡಿಯಲು ಬಳಕೆ ಮಾಡಬಾರದು. ನದಿಗಳ ನೀರಿನಲ್ಲಿ ಆಮ್ಲಜನಕದ ಕೊರತೆ, ಬಯೋಕೆಮಿಕಲ್ ಆಕ್ಸಿಜನ್, ಕೋಲಿಫಾರ್ಮ್ ಬ್ಯಾಕ್ಟೀರಿಯಾ, ಫೆಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.
