
ಉದಯವಾಹಿನಿ, ವಿಜಯಪುರ: ಜಿಲ್ಲೆಯ ಸಿಂದಗಿ ಬೈಪಾಸ್ ಬಳಿ ಸಿಂದಗಿ ಶಾಸಕ ಅಶೋಕ್ ಮನಗೂಳಿ ಅವರ ಕಾರಿಗೆ ವಾಹನವೊಂದು ಡಿಕ್ಕಿಹೊಡೆದಿದೆ. ಶಾಸಕರ ಕಾರಿನಲ್ಲಿ ಅವರ ಪುತ್ರಿ, ಸಹೋದರನ ಮಗ ಪ್ರಯಾಣಿಸುತ್ತಿದ್ದರು. ಈ ವೇಳೆ KA 03 NT 2827 ನಂಬರ್‌ನ ವಿಧಾನಸೌಧ ಪಾಸ್ ಹೊಂದಿರುವ ಇನ್ನೋವಾ ಹೈಕ್ರಾಸ್ ಕಾರಿಗೆ ಹಾಗೂ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಲಬುಗಿಯಿಂದ ಸಿಂದಗಿ ಕಡೆಗೆ ಬರ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
